ಬಂಟ್ವಾಳ: ತಾಲೂಕಿನ ಬರಿಮಾರು ಗ್ರಾಮದ ಬಲ್ಯ ನಿವಾಸಿ ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ಪ್ರಾಕ್ಟೀಸ್ ಮಾಡುತ್ತಿರುವ ಅನಿಲ್ ಜಾನ್ ಸಿಕ್ವೇರಾ ಅವರು ತನ್ನ ೨೫ನೇ ವಯಸ್ಸಿನಲ್ಲಿ ಕರ್ನಾಟಕ ಸಿವಿಲ್ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಬರಿಮಾರಿನ ಎವರೆಸ್ಟ್ ಸಿಕ್ವೇರಾ ಹಾಗೂ ಐವಿ ಸಿಕ್ವೇರಾ ದಂಪತಿಯ ಪುತ್ರನಾಗಿರುವ ಅವರು ಬರಿಮಾರು ಸಂತ ಜೋಸೆಫರ ಅನುದಾನಿತ ಶಾಲೆಯಲ್ಲಿ ಪ್ರಾಥಮಿಕ, ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಪ್ರೌಢ, ಪುತ್ತೂರು ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ ಪಿಯುಸಿ ಹಾಗೂ ಮಂಗಳೂರು ಎಸ್.ಡಿ.ಎಂ.ಕಾನೂನು ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದು ಕಳೆದ ೨ ವರ್ಷಗಳಿಂದ ಪ್ರಾರಂಭದಲ್ಲಿ ಮಂಗಳೂರಿನ ನ್ಯಾಯವಾದಿ ವರದರಾಜ ಅವರ ಬಳಿ, ಪ್ರಸ್ತುತ ನ್ಯಾಯವಾದಿಗಳಾದ ಪ್ರವೀಣ್ ಡಿಸೋಜ, ನವೀನ್ ಪಾಯಿಸ್ ಅವರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದರು. ಕಳೆದ ನವೆಂಬರ್ ತಿಂಗಳಲ್ಲಿ ಅವರು ನ್ಯಾಯಾಧೀಶರ ಹುದ್ದೆಗೆ ಮುಖ್ಯಪರೀಕ್ಷೆ ಬರೆದಿದ್ದರು.