Thursday, June 26, 2025

ಅನಂತಾಡಿ ಮತ್ತು ಮಾಣಿ ಉಭಯ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರ ಮನವಿ

ಮಂಗಳೂರು: ಬಂಟ್ವಾಳ ತಾಲೂಕಿನ ಅನಂತಾಡಿ ಮತ್ತು ಮಾಣಿ ಗ್ರಾಮದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು ಸ್ತಳೀಯ ಕೃಷಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಮಾಹಿತಿ ಲಭ್ಯ ವಾಗಿದೆ.

ಅನಂತಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಾಡು ಪ್ರಾಣಿಗಳ ಬೀಕರ ಹಾವಳಿ ಆಗುತ್ತಿದ್ದು ಇಲ್ಲಿನ ನೇಲ್ತೋಟ್ಟು ,ಕೊಂಗಲಾಯಿ ,ತಾಕೋಟೇ ಮಾರ್ ,ತುಂಬೆಕೋಡಿ ,ಪೂಂಜಾವ್ ಪ್ರದೇಶದಲ್ಲಿ ಭತ್ತ,ಅಡಿಕೆ, ತರಕಾರಿ ಬೆಳೆಗಳನ್ನು ಬೆಳೆಯುವ ಕೃಷಿಕರ ಭೂಮಿಗೆ ಸುಳ್ಳಮಲೆಯ ರಕ್ಷಿತಾರಣ್ಯ ದಿಂದ ಕಾಡುಕೋಣ( ಕಾಟಿ) ಉಪದ್ರವ ಹೆಚ್ಚಾಗಿದೆ.ಇದರಿಂದ ರೈತರಿಗೆ ಕೃಷಿ ನಾಶ ಮಾತ್ರ ಅಲ್ಲದೆ ಸುಮಾರು ನೂರಕ್ಕೂ ಅಧಿಕ ಮನೆಯ ಜನರಿಗೆ ಕಾಡುಕೋಣ ಗಳ ಹಾವಳಿಯಿಂದ ಒಬ್ಬೊಬ್ಬರು ಪ್ರಾಣ ಭೀತಿಯಿಂದ ನಡೆದಾಡಲು ಕೂಡ ಹೆದರುವಂತಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಈ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅನಂತಾಡಿ ಗ್ರಾಮದ ಕೃಷಿಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಅದೇ ರೀತಿ ಮಾಣಿ ಗ್ರಾಮದಲ್ಲಿ ಬಾಯಿಲ,ಗೋಳಿಮಾರ್,ಶಂಭುಗ, ಪಳ್ಳತ್ತಿಲ,ಬಾಬುಕೋಡಿ, ವಾರಾಟ, ಕಂಬ್ಳ ಮೊದಲಾದ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕಾಡುಕೋಣಗಳ ಹಾವಳಿ ಇದೆ .ಬಾಬುಕೋಡಿ ಮತ್ತು ವಾರಾಟ ದಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ.

ಮಾತ್ರವಲ್ಲದೆ ಉಭಯ ಗ್ರಾಮದಲ್ಲಿ ಕಾಡುಹಂದಿ,ನವಿಲು ಮೊದಲಾದ ಪ್ರಾಣಿಗಳ ಕೃಷಿಭೂಮಿಗೆ ಲಗ್ಗೆ ಇಡುವುದು ತೀರಾ ಸಾಮಾನ್ಯವಾಗಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಜನರ ಕೃಷಿ ನಾಶ ಅವ್ಯಾಹತವಾಗಿ ಆಗುತ್ತಿದ್ದು ಒಂದು ವೇಳೆ ಜನರ ಪ್ರಾಣಹಾನಿಯಾದರೆ ಯಾರು ಹೊಣೆ?

ಆದ್ದರಿಂದ ಸಂಬಂದಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಡುಪ್ರಾಣಿಗಳ ಹಾವಳಿಗೆ ಸೂಕ್ತವಾದ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಅನಂತಾಡಿ ಮತ್ತು ಮಾಣಿ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...