Monday, January 26, 2026

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ ಅವರಿಗೆ ಶಾಲು ಹೊದಿಸಿ ಫಲಾಪುಷ್ಪ ನೀಡಿ ಗೌರವಿಸಲಾಯಿತು.

ಶ್ರೀಗಳ ಭೇಟಿಯ ಉದ್ದೇಶ:

ಸತತ 2ವರುಷಗಳಿದ 108 ದಿನ108 ಮಠ ಮಂದಿರದಂತಹ ಪುಣ್ಯ ಕ್ಷೇತ್ರಗಳಿಗೆ ಭೇಟಿಕೊಟ್ಟು ಸನಾತನ ಧರ್ಮ ಭೂಮಿಯ ರಕ್ಷಣೆ, ಯೋಧರು ಅವರ ಕುಟುಂಬ ರಕ್ಷಣೆ, ಹಿಂದೂಗಳ ಒಗ್ಗಟ್ಟು, ಹಾಗೂ ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿಯಲ್ಲಿ ಶೀಘ್ರದಲ್ಲಿ ಭವ್ಯ ಮಂದಿರದ ನಿರ್ಮಾಣದ ಸಂಕಲ್ಪ ಹೊತ್ತು ಅವರು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಪ್ರಸ್ತುತ ಅವರು ಮಥುರಾ ಮುಕ್ತಿ ನ್ಯಾಸ ಸಮಿತಿಯ ಕರ್ನಾಟಕದ ರಾಜ್ಯದ ಅಧ್ಯಕ್ಷರಾಗಿ, ಅಖಿಲ ಭಾರತ ಸಂತ ಸಮಿತಿಯ ಕರ್ನಾಟದ ಸಂಯೋಜಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಗಾಂಭೀರ, ಪ್ರ ಕಾರ್ಯದರ್ಶಿ ಕರುಣಾಕರ ಕೊಟ್ಟಾರಿ,ಪ್ರತಿಷ್ಠಾ ವರ್ದಂತಿ ಉತ್ಸವ ಸಮಿತಿ ಅಧ್ಯಕ್ಷ ಧನರಾಜ್ ಶೆಟ್ಟಿ ತೇವು, ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...