Friday, June 27, 2025

ಯಕ್ಷಾಭಿಮಾನಿಗಳು ಅಣ್ಣಳಿಕೆ, ಕೊಯಿಲ ಅ.31: ಸಂಸ್ಮರಣೆ, ತಾಳಮದ್ದಳೆ

ಬಂಟ್ವಾಳ:  ಯಕ್ಷಾಭಿಮಾನಿಗಳು ಅಣ್ಣಳಿಕೆ, ಕೊಯಿಲ ಇದರ ವತಿಯಿಂದ 13ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಯಕ್ಷಗಾನ ಕಲಾವಿದ, ಸಂಘಟಕ ದಿ.ಶ್ರೀ ವಿಶ್ವನಾಥ ಸ್ವಾಮಿ,ಸುವರ್ಣನಾಡು ಅವರ ಸಂಸ್ಮರಣೆ ಮತ್ತು  ಯಕ್ಷಗಾನ ತಾಳಮದ್ದಳೆ ಅಣ್ಣಳಿಕೆ ವಿಘ್ನೇಶ್ವರ ಸಭಾಭವನದಲ್ಲಿ ಅ.31ರಂದು ರವಿವಾರ ಜರಗಲಿದೆ.
ಮಧ್ಯಾಹ್ನ 2 ಗಂಟೆಗೆ ಸಂಸ್ಮರಣೆ ನಡೆಯಲಿದ್ದು, ಖ್ಯಾತ ಹಿರಿಯ ಹಾಸ್ಯ ಕಲಾವಿದ ಪದ್ಮನಾಭ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಗುವುದು. ಬಳಿಕ ಜಿಲ್ಲೆಯ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ , ಹರಿಪ್ರಸಾದ್ ರಾವ್ ಸಂಯೋಜನೆಯಲ್ಲಿ ವಾಲಿ ಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ರವಿಚಂದ್ರ ಕನ್ನಡಿಕಟ್ಟೆ, ಚಂದ್ರಶೇಖರ ಭಟ್ ಕೊಂಕಣಾಜೆ, ಸತ್ಯಜಿತ್ ರಾವ್ ರಾಯಿ, ವಿಜಯ ಅರಳ, ಮುಮ್ಮೇಳದಲ್ಲಿ ಉಜಿರೆ ಅಶೋಕ ಭಟ್, ಸುಣ್ಣಂಬಳ ವಿಶ್ವೇಶ್ವರ ಭಟ್,ದಿನೇಶ್ ಶೆಟ್ಟಿ ಕಾವಳಕಟ್ಟೆ, ಪ್ರೇಮ್ ರಾಜ್ ಕೊಯಿಲ, ಸದಾಶಿವ ಶೆಟ್ಟಿ ಸಿದ್ದಕಟ್ಟೆ ಭಾಗವಹಿಸುವರು. ಎಂದು ಸಂಘಟಕ ರಾಮಚಂದ್ರ ಶೆಟ್ಟಿಗಾರ್ ಪ್ರಕಟನೆಯಲ್ಲಿ  ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...