Wednesday, June 25, 2025

ಅಣ್ಣಳಿಕೆ ಫ್ರೆಂಡ್ಸ್ ಬಳಗದಿಂದ ಪ್ರತಿಭಾನ್ವೇಷಣೆ

ಬಂಟ್ವಾಳ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸುವ ಸಾಮರ್ಥ್ಯ ಪೋಷಕರಲ್ಲಿರಬೇಕು.ಮಕ್ಕಳಲ್ಲಿ ಕಲಾಪ್ರಕಾರಗಳ ಮೇಲಿನ ಆಸಕ್ತಿಯನ್ನು ಬೆಳೆಸುವ ಕಾರ್ಯ ಮಾಡಬೇಕು. ನಿಷ್ಕಲ್ಮಶವಾದ ಮಕ್ಕಳ ಮನಸ್ಸನ್ನು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೋತ್ಸಾಹಿಸಿ ಸೃಜನಶೀಲತೆಯನ್ನು ವೃದ್ಧಿಸಬೇಕು. ಆದರಿಂದ ಮಕ್ಕಳ ಪ್ರತಿಭೆ ವಿಕಸನಗೊಳ್ಳುವುದು ಎಂದು ರೋಟರಿ ವಲಯ ನಾಲ್ಕರ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ರೋ| ಪ್ರಕಾಶ್ ಕಾರಂತ್ ಅವರು ಹೇಳಿದರು.
ಅವರು ಬಂಟ್ವಾಳ ತಾ| ಕೊಯಿಲ ಅಣ್ಣಳಿಕೆ ಫ್ರೆಂಡ್ಸ್ ಬಳಗ ಇದರ ಆಶ್ರಯದಲ್ಲಿ ಲೊರೆಟ್ಟೊಹಿಲ್ ರೋಟರಿಕ್ಲಬ್ ಸಹಯೋಗದಲ್ಲಿ ಅಣ್ಣಳಿಕೆ ಶ್ರೀ ವಿಘ್ನೇಶ್ವರ ಕಲಾವೇದಿಕೆಯಲ್ಲಿ ಜ.19 ರಂದು ರಾತ್ರಿ ಜರಗಿದ 12ನೇ ವರ್ಷದ ಪ್ರತಿಭಾನ್ವೇಷಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ, ಪತ್ರಕರ್ತ ಆಲದಪದವು ಗೋಪಾಲ ಅಂಚನ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಎಲ್ಲಾ ಮಕ್ಕಳಲ್ಲಿ ಪ್ರತಿಭೆ ಹುದುಗಿರುತ್ತದೆ. ಅದಕ್ಕೆ ಪೂರಕ ವಾತಾವರಣ ದೊರಕಿದಾಗ ಪ್ರತಿಭೆ ವಿಕಸನವಾಗುತ್ತದೆ. ಮಕ್ಕಳಿಗೆ ಓದುವಿಕೆಯನ್ನೇ ಗುರಿಯಾಗಿಸದೆ ಕಲೆ, ಸಾಹಿತ್ಯದ ಜತೆ ಉತ್ತಮ ಸಂಸ್ಕಾರ ನೀಡುವುದು ಹಿರಿಯರ ಕರ್ತವ್ಯ ಎಂದು ಹೇಳಿದರು.
ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಜೈನ್, ರಾಯಿ-ಕೊಯಿಲ-ಅರಳ ಹಿಂದೂ ಧರ್ಮೊತ್ಥಾನ ವೇದಿಕೆ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಪಂಜಿಕಲ್ಲು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಅಸಲ್ದೋಡಿ, ಸಂಗಬೆಟ್ಟು ಗ್ರಾ.ಪಂ. ಸದಸ್ಯ ದೇವಪ್ಪ ಕರ್ಕೇರ ಉಪಸ್ಥಿತರಿದ್ದರು. ಫ್ರೆಂಡ್ಸ್ ಬಳಗದ ಸುಮಿತ್ರಾ ಆರ್. ಶೆಟ್ಟಿಗಾರ್, ಮಾಧವ ಅಣ್ಣಳಿಕೆ, ಸುರೇಶ್‌ಅಣ್ಣಳಿಕೆ, ಸುಜಾತಾ, ಅಂಕಿತಾ, ಆಕಾಶ್, ಮೋಹನ್ ಮತ್ತಿತರರು ಉಪಸ್ಥಿತರಿದ್ದರು
ಈ ಸಂದರ್ಭದಲ್ಲಿ ಕೊಯಿಲ ಹಿ.ಪ್ರಾ.ಶಾಲೆಯ 5 ರಿಂದ 7ನೇ ತರಗತಿ ಮತ್ತು ಪ್ರೌಢಶಾಲಾ 10ನೇ ತರಗತಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸ್ಮರಣಿಕೆ ನೀಡಲಾಯಿತು.
ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ ಸ್ವಾಗತಿಸಿದರು. ಫ್ರೆಂಡ್ಸ್ ಬಳಗ ಸಂಚಾಲಕ ರಾಮಚಂದ್ರ ಶೆಟ್ಟಿಗಾರ್ ಅವರು ಪ್ರಸ್ತಾವಿಸಿದರು. ಚಂದ್ರಹಾಸ ಅಣ್ಣಳಿಕೆ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಪರಿಸರದ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ವಿದ್ಯಾರ್ಥಿಗಳು, ಸ್ಥಳೀಯರು ಸಾಂಸ್ಕೃತಿಕ, ಮನೋರಂಜನ ಕಾರ್ಯಕ್ರಮ ಪ್ರದರ್ಶಿಸಿದರು.

More from the blog

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ- ರಾಜೇಶ್ ಬಿ

ಮಂಗಳೂರು : ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ...