Friday, January 30, 2026

ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ: ನಿರೂಪಕಿ ಅನುಶ್ರೀ

ಮಂಗಳೂರು : ಸಿಸಿಬಿಯಿಂದ ನೀಡಿದ ನೋಟಿಸ್ ನಿಂದಾಗಿ ಇಂದು ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ ಮಂಗಳೂರಿನಲ್ಲಿನ ಸಿಸಿಬಿ ಕಚೇರಿಯ ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಅಧಿಕಾರಿಗಳ ಮುಂದೆ ಹಾಜರಾದರು. ಪೊಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಮತ್ತೆ ವಿಚಾರಣೆಗೆ ಕರೆದ್ರೆ ಹಾಜರಾಗುವುದಾಗಿ ಖ್ಯಾತ ನಿರೂಪಕಿ ಅನುಶ್ರೀ ತಿಳಿಸಿದ್ದಾರೆ.
ಸತತ ಮೂರು ಗಂಟೆಗಳ ಸಿಸಿಬಿ ವಿಚಾರಣೆ ಮುಗಿಸಿ ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅನುಶ್ರಿ, ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ತರುಣ್ ರಾಜ್ ನನಗೆ 12 ವರ್ಷಗಳ ಹಿಂದಿನ ಪರಿಚಯ. ತರುಣ್ ರಾಜ್ ನನಗೆ 6 ತಿಂಗಳು ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದಾರೆ. ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.

https://www.youtube.com/watch?v=q_Op07X51rQ&t=130s

ಪೊಲೀಸರು ಇವತ್ತು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮುಂದಿನ ವಿಚಾರಣೆ ಬಗ್ಗೆ ಏನೂ ಹೇಳಿಲ್ಲ. ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ. ಇವತ್ತು ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತವಾಗಿದೆ. ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದರು.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...