Friday, July 11, 2025

ಅರಳ: ಶ್ರೀ ಗರುಡ ಮಹಾಕಾಳಿ ದೇವಸ್ಥಾನ ಫೆ. 14ರಿಂದ ವಾರ್ಷಿಕ ಜಾತ್ರೆ, ಮಹಾ ರಥೋತ್ಸವ

ಬಂಟ್ವಾಳ: ತಾಲ್ಲೂಕಿನ ಅರಳ ಮತ್ತು ಕೊಯಿಲ ಗ್ರಾಮ ದೇವತೆಯಾಗಿ ಗುರುತಿಸಿಕೊಂಡಿರುವ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಇದೇ 14ರಿಂದ 19ರತನಕ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ರಥೋತ್ಸವ ಕಾರ್ಯಕ್ರಮವು ನಡ್ವಂತಾಡಿ ಉದಯ ಪಾಂಗಣ್ಣಾಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಇದೇ 14ರಂದು ಬೆಳಿಗ್ಗೆ ಗಂಟೆ 8.45ಕ್ಕೆ ಕುಂಟ ಮುಹೂರ್ತ ನಡೆದು ಸಂಜೆ ಗಂಟೆ 5.30ಕ್ಕೆ ಧೂಮಾವತಿ ದೈವದ ಭಂಡಾರ ಬಂದು ಬಳಿಕ ಧ್ವಜಾರೋಹಣ ಉತ್ಸವ ನಡೆಯಲಿದೆ.
ಇದೇ 15ರಂದು ರಾತ್ರಿ ದೀಪದಬಲಿ ಉತ್ಸವ, ರಾತ್ರಿ 9.30 ಗಂಟೆಗೆ ಕಟೀಲು ಮೇಳದವರಿಂದ ‘ಪಂಚ ಕಲ್ಯಾಣ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಇದೇ 16ರಂದು ನಡುಬಲಿ ಉತ್ಸವ, ಚಂದ್ರಮಂಡಲೋತ್ಸವ ಹಾಗೂ ರಾತ್ರಿ 9ಗಂಟೆಗೆ ಕೊಯಿಲ ವೈಷ್ಣವಿ ಕಲಾವಿದರಿಂದ ‘ಕುಸಲ್ದ ಗೌಜಿ’ ಕಾರ್ಯಕ್ರಮ ನಡೆಯಲಿದೆ.
ಇದೇ 17ರಂದು ರಾತ್ರಿ 7ಗಂಟೆಗೆ ‘ಮಹಾ ರಥೋತ್ಸವ’ ಹಾಗೂ ರಾತ್ರಿ 9.30 ಗಂಟೆಗೆ ಮಂಗಳೂರು ಓಂಕಾರ್ ಕ್ರಿಯೇಶನ್ ಮತ್ತು ಕಲಾ ಸಂಗಮ ಕಲಾವಿದರಿಂದ ‘ದೇಶ ಕರೆದಾಗ’ ನಾಟಕ ಪ್ರದರ್ಶನಗೊಳ್ಳಲಿದೆ.
ಇದೇ 18ರಂದು ಬೆಳಿಗ್ಗೆ ಚಂಡಿಕಾಯಾಗ, ಬೆಳಿಗ್ಗೆ 9ಗಂಟೆಗೆ ತುಲಾಭಾರ ಸೇವೆ, 10.30 ಗಂಟೆಗೆ ಕಲ್ಲೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಧೂಮಾವತಿ ದೈವದ ನೇಮೋತ್ಸವ, ರಾತ್ರಿ 9 ಗಂಟೆಗೆ ಸುಂಕದಕಟ್ಟೆ ತಂಡದಿಂದ ‘ಆಯೆ ಬರೆತಿನ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....