Wednesday, February 12, 2025

ಅರಣ್ಯ ಇಲಾಖಾ ವಾಹನ ಡಿಕ್ಕಿ, ಪಾದಾಚಾರಿ ಸಾವು: ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣ ಸಂಶಯ?

ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಟ್ರಾಫಿಕ್ ಎಸ್.ಐ.ಸುತೇಶ್ ಮಾಧ್ಯಮಕ್ಕೆ ತಿಳಿಸಿದ್ದಾರೆ.


ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬಿಸಿರೋಡು ಕಡೆಯಿಂದ ಮಂಗಳೂರು ‌ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸದ್ಯ ಮೃತಪಟ್ಟ ಪಾದಾಚಾರಿಯ ಬಗ್ಗೆ ವಿವರ ಲಭ್ಯವಾಗಿಲ್ಲ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ.
ಪುತ್ತೂರು ಅರಣ್ಯ ಇಲಾಖೆಯ ಆರ್.ಎಫ್.ಕಿರಣ್ ಎಂಬವರು ಸಂಚಾರ ಮಾಡುತ್ತಿದ್ಧ ಬೊಲೆರೋ ವಾಹನ ಪರಂಗಿಪೇಟೆಯ ರಿಕ್ಷಾ ಪಾರ್ಕ್ ನ ಎದುರು ಪಾದಚಾರಿಗೆ ಡಿಕ್ಕಿಹೊಡೆದಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

*ಲಕ್ಷಾಂತರ ರೂ ಹಣದ ಕಟ್ಟು ಇಲಾಖಾ ವಾಹನದಲ್ಲಿ*

ಅರಣ್ಯ ಇಲಾಖೆಯ ವಾಹನ ಅಪಘಾತ ಸಂಭವಿಸಿದ ಕೂಡಲೇ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ರಕ್ತಸಿಕ್ತವಾಗಿ ಒದ್ದಾಡುತ್ತಿದ್ದಾತನನ್ನು ಅಲ್ಲೇ ಇದ್ದ
ರಿಕ್ಷಾ ಚಾಲಕರಿಬ್ಬರು ಅದೇ ಸರಕಾರಿ ಇಲಾಖೆಯ ವಾಹನದಲ್ಲಿ ಹಾಕಿಕೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪಾದಾಚಾರಿಯನ್ನು ಬದುಕಿಸುವ ಪ್ರಯತ್ನ ಫಲನೀಡಲಿಲ್ಲ.
ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅನಾಮಿಕನ ಜೀವ ಉಳಿಸುವ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳಿಬ್ಬರು ಸರಕಾರಿ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ವಾಪಾಸು ಬರುತ್ತಿದ್ದ ವೇಳೆ ವಳಚ್ಚಿಲ ಎಂಬಲ್ಲಿಗೆ ಇಲಾಖೆಯ ಚಾಲಕ ಆಗಮಿಸಿ ವಾಹನದೊಳಗಿದ್ದ ಕಡತಗಳನ್ನು ಪಡೆದುಕೊಂಡು ಹೋಗಿದ್ದಾರೆ.
ಅದರೆ ಈ ಇಲಾಖಾ ವಾಹನದಲ್ಲಿ ಲಕ್ಷಾಂತರ ರೂ ಹಣದ ಕಂತೆ ಇತ್ತು ಎಂದು ಹೇಳಲಾಗಿದೆ.
ಚಾಲಕನ ಸೀಟಿನ ಬಳಿಯಲ್ಲಿ ಇತ್ತು ಎನ್ನಲಾಗಿರುವ ಹಣದ ಕಂತೆಯನ್ನು ವಳಚ್ಚಿಲ್ ನಿಂದ ಎಸ್ಕೇಪ್ ಮಾಡಲಾಗಿದೆಯೆ? ಹೀಗೊಂದು ಸಂಶಯ ಇದೀಗ ಸ್ಥಳೀಯವಾಗಿ ಉಂಟಾಗಿದ್ದು, ಇಷ್ಟೊಂದು ಹಣವನ್ನು ಇಲಾಖಾ ವಾಹನದಲ್ಲಿ ರಾತ್ರಿ ವೇಳೆ ಎಲ್ಲಿಗೆ ಕೊಂಡುಹೋಗಲಾಗುತ್ತಿತ್ತು ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಆದರೆ ನಿಜವಾಗಿಯೂ ಅದರಲ್ಲಿ ಹಣದ ಕಂತೆಯಿತ್ತಾ? ಅಥವಾ ಗಾಳಿಸುದ್ದಿಯಾ ಎಂಬುದನ್ನು ಮೇಲಾಧಿಕಾರಿಗಳ ತನಿಖೆಯ ಬಳಿಕವಷ್ಟೇ ತಿಳಿಯಬೇಕಾಗಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...