Friday, June 27, 2025

ಅನಾರೋಗ್ಯದಿಂದ ಐಸೋಲೇಶನ್‌ಗೆ ಒಳಗಾದ ದೆಹಲಿ ಸಿಎಂ ಕೇಜ್ರಿವಾಲ್ – ಕೋವಿಡ್-19 ಪರೀಕ್ಷೆ..?

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯದಿಂದ ಬಳಲುತ್ತಿದ್ದು, ಕೊರೊನಾವೈರಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಗಂಟಲು ನೋವು, ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವುದರಿಂದ, ಆಮ್ ಆದ್ಮಿ ಪಕ್ಷದ(ಎಎಪಿ) ಮುಖ್ಯಸ್ಥ ಅರವಿಂದ್ ಕ್ರೇಜಿವಾಲ್ ಸ್ವತಃ ಐಸೋಲೇಶನ್‌ಗೆ ಒಳಗಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾನುವಾರ ಸಂಜೆ ಆನ್‌ಲೈನ್ ಮೂಲಕ ಮಾಧ್ಯಮಗಳಿಗೆ ವಿವರಣೆ ನೀಡುವ ಸಲುವಾಗಿ ಕೊನೆ ಬಾರಿ ಕಾಣಿಸಿಕೊಂಡಿದ್ದರು. ನಂತರ ಅನಾರೋಗ್ಯ ಕಾರಣದಿಂದ ತಮ್ಮ ಎಲ್ಲಾ ಸಭೆಗಳನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಒಟ್ಟು 28,936 ಕರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 812 ಜನರು ಸಾವನ್ನಪ್ಪಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...