Friday, June 27, 2025

ಸರ ಕಳ್ಳತನ: ಇಬ್ಬರ ಸೆರೆ

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ಉಳಿ ಗ್ರಾಮ ದೇವಸ್ಥಾನದ ವಠಾರದಲ್ಲಿ ಚಿನ್ನದ ಸರ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಟ್ವಾಳ ತಾಲೂಕು ಉಳಿ ಗ್ರಾಮ ದೇವಸ್ಥಾನದ ವಠಾರದಲ್ಲಿ ತೆಂಕಕಜೆಕಾರು ಗ್ರಾಮದ ನಿವಾಸಿ ಹೊನ್ನಮ್ಮ ಮತ್ತು ಉಳಿ ಗ್ರಾಮದ ನಿವಾಸಿ ಮೋನಮ್ಮ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನ ಆಗಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2020 ಹಾಗೂ 05/2020 ಕಲಂ 379 ಐ.ಪಿ.ಸಿ ಯಂತೆ ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹಾಸನ ಜಿಲ್ಲೆ, ಅರಕಲಗೂಡು ತಾಲೂಕು, ಕೋಟೆಸಾಲುಗೇರಿ ನಿವಾಸಿಗಳಾದ ಲಕ್ಷ್ಮೀಯಮ್ಮ(ಗೌರಮ್ಮ) ಹಾಗೂ ಅಶ್ವಿನಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕಳವು ಮಾಡಿದ 23.900 ಗ್ರಾಂ ತೂಕದ ಚಿನ್ನದ ಚೈನ್‌ ಹಾಗೂ 16.180 ಗ್ರಾಂ ತೂಕದ ಚಿನ್ನದ ಚೈನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರ ಒಟ್ಟು ಅಂದಾಜು ಮೌಲ್ಯ ರೂ. 1,37,000/- ಎಂದು ಅಂದಾಜಿಸಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...