ಬಂಟ್ವಾಳ: ಬಸ್ಸ್ ಗಳಿಗೆ ಕಲ್ಲು ಹೊಡೆದು ಹಾನಿ ಮಾಡಿ ಶಾಂತಿ ಕದಡಲು ಪ್ರಯತ್ನ ಪಡುವ ಕಿಡಿಗೇಡಿಗಳ ಪತ್ತೆಗೆ ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್ ವಿಶೇಷ ತಂಡ ಕಾರ್ಯೋನ್ಮುಖವಾಗಿದೆ.
ಈಗಾಗಲೇ ಆರರಿಂದ ಎಂಟು ಜನ ಕಿಡಿಗೇಡಿಗಳು ಈ ಕೃತ್ಯದಲ್ಲಿ ಭಾಗವಹಿಸಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ಲಭ್ಯವಾಗಿದ್ದು ಇವರನ್ನು ಸದ್ಯದಲ್ಲೇ ಪತ್ತೆಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ನಾಗರಿಕರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ಸದ್ಯದಲ್ಲೇ ಇಂತಹ ಸಮಾಜ ವಿರೋದಿ ಚಟುವಟಿಕೆ ಮಾಡುತ್ತಿರುವ ಇಂತಹ ಕಿಡಿಗೇಡಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ.
