ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಗ್ಗೆ ವರದಿಯಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಟಿ.ಡಿ.ಕ್ರಾಸ್ ನ ಸುಭಾಷ್ ನಗರ ನಿವಾಸಿ ಕೃಷ್ಣಪ್ಪ ಅವರ ಮಗ ನಂಜುಂಡ ಯಾನೆ ಪ್ರಸನ್ನ ಬಂಧಿತ ಆರೋಪಿ.


ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳ ಹಿಂದೆ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ವಾರೆಂಟ್ ಆರೋಪಿಯಾದ ನಂಜುಂಡ ಇಂದು ಮದ್ಯಾಹ್ನದ ವೇಳೆ ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದ ವಾಗಿ ತಿರುಗಾಡುವ ಬಗ್ಗೆ ಮಾಹಿತಿ ಯ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಚಂದ್ರಶೇಖರ್ ಹಾಗೂ ಸಿಬ್ಬಂದಿ ಗಳಾದ ಸುರೇಶ್ ಪಡಾರ್ ಹಾಗೂ ದೇವಪ್ಪ ಅವರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.