Wednesday, June 25, 2025

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ

ವಿಟ್ಲ: ವಿಟ್ಲ ಸಮೀಪದ ಶಾಲೆಯೊಂದರ ಅಪ್ರಾಪ್ತ ಎಸ್ ಎಸ್ ಎಲ್ ಸಿ  ವಿದ್ಯಾರ್ಥಿನಿಗೆ
ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕಲ್ಲಡ್ಕ ಸಮೀಪದ ಕೆ.ಸಿ ರೋಡ್ ನಿವಾಸಿ ಸತೀಶ್ ಕುಲಾಲು(44)  ಬಂಧಿತ ಆರೋಪಿ. ಈತ ಕಳೆದ
ಕೆಲವು ದಿನಗಳಿಂದ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ  ಹೋಗುತ್ತಿದ್ದ ವೇಳೆ
ಆಕೆಯನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದು, ಆಕೆ ಹೋಗುತ್ತಿದ್ದ ಬಸ್ಸಿಗೂ ಹತ್ತಿ
ಕಿರುಕುಳ ನೀಡುತ್ತಿರುವುದಲ್ಲದೆ. ಮೈಗೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ
ವಿದ್ಯಾರ್ಥಿನಿಯ ಊರಿನ ಮತ್ತೊಬ್ಬ ವಿದ್ಯಾರ್ಥಿ ವಿಚಾರಿಸಿದಾಗ ಆತನಿಗೆ ಹಲ್ಲೆ
ನಡೆಸಿದ್ದಾನೆ. ಈತನ ಕಿರುಕುಳ ಸಹಿಸಲಾಗದೇ ವಿದ್ಯಾರ್ಥಿನಿ ಈ ಬಗ್ಗೆ  ಮನೆಯಲ್ಲಿ
ತಿಳಿಸಿದ್ದಾಳೆ. ವಿದ್ಯಾರ್ಥಿನಿ ತನ್ನ ಹೆತ್ತವರ ಹಾಗೂ  ಶಾಲಾ ಶಿಕ್ಷಕರ ಜತೆ ವಿಟ್ಲ
ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದು, ಈ ಸಂಬಂಧ ಠಾಣೆಯಲ್ಲಿ ಪೋಕ್ಸೋ
ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯೂ ಕೂಡಾ ದೂರು
ನೀಡಿದ್ದು, ಈ ಬಗ್ಗೆಯೂ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧಿಸಿ ವಿಟ್ಲ ಎಸೈ ಯಲ್ಲಪ್ಪ
ಮತ್ತು ಸಿಬ್ಬಂದಿಗಳ ತಂಡ ತಕ್ಷಣವೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ
ಹಾಜರುಪಡಿಸಿದ್ದಾರೆ.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...