Thursday, February 5, 2026

ವಾರೆಂಟ್ ಆರೋಪಿ ಬಂಧನ

ವಿಟ್ಲ: ಹಲವು ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು ಎರಡು ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಕ್ರಬೈಲು ನಿವಾಸಿ ಬಾರಿಕ್ (33) ಬಂಧಿತ ಆರೋಪಿಯಾಗಿದ್ದಾನೆ. ಈತನು ವಿಟ್ಲ ಪೊಲೀಸ್ ಠಾಣೆಯ ಹಲವು ಕೇಸುಗಳಲ್ಲಿ ವಾರಂಟ್ ಗೆ ಸುಮಾರು 2 ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಕರೆಸಿಕೊಂಡಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇರುವಿಕೆಯ ಖಚಿತ ಮಾಹಿತಿ ಪಡೆದ ವಿಟ್ಲ ಪೊಲೀಸ್ ಸಿಬ್ಬಂದಿಗಳಾದ ಶ್ರೀಧರ ಕೆ., ಪ್ರಥಾಪ್ ರೆಡ್ಡಿ, ವಿನಾಯಕ್, ಸಂಜೀವ ಅವರು ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಡಿವೈಎಸ್‌ಪಿ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಪಿ ಎಸ್ ಐ ವಿನೋದ್ ರೆಡ್ಡಿ ಅವರ ಸೂಚನೆಯಂತೆ ಬಂಧಿಸಿದ್ದಾರೆ.

More from the blog

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...

ಸುಮಂತ್ ಸಾವಿನ ಪ್ರಕರಣ : ಪೊಲೀಸರ ತನಿಖೆ ಚುರುಕು..

ಬೆಳ್ತಂಗಡಿ : ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಸಾವನ್ನಪ್ಪಿ ಇಂದಿಗೆ 22 ದಿನ ಕಳೆದರೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಸುಳಿವು ಸಿಕ್ಕಿಲ್ಲ. ಜ.14.ರಂದು ಬೆಳಿಗ್ಗೆ ಧನುಪೂಜೆಗೆಂದು ಮುಂಜಾನೆ ಮನೆಯಿಂದ ಹೋದ...

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...