Friday, June 27, 2025

ಪುಣಚ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯ ಬಂಧನ

ವಿಟ್ಲ: ಬಾಲಕಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುಣಚ ಗ್ರಾಮದ ಮನೋಹರ ಬಂಧಿತ ಆರೋಪಿಯಾಗಿದ್ದಾರೆ. ಆರೋಪಿ  ಅದೇ ಗ್ರಾಮ ಏಳನೇ ತರಗತಿಯ ಬಾಲಕಿಯನ್ನು ಸುಮಾರು ಒಂದು ವರ್ಷದಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದು, ಫೆ.2ರಂದು ಬಾಲಕಿಯು ಪರಿಯಾಲ್ತಡ್ಕ ಪೇಟೆಗೆ ಹೋಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ವಾಪಾಸ್ ಬರುತ್ತಾ ಪುಣಚ ಗ್ರಾಮದ ತೋರಣಕಟ್ಟೆ ಎಂಬಲ್ಲಿ ಒಬ್ಬಳೇ ನಿಂತಿರುವಾಗ ಆರೋಪಿಯು ಮೋಟಾರ್ ಸೈಕಲ್ ನಲ್ಲಿ ಬಂದು ಕಿರುಕುಳ ನೀಡಿದ್ದ. ಈ ಕುರಿತು ಫೆ.21ರಂದು ಬಾಲಕಿಯ ಹೆತ್ತವರು ನೀಡಿದ ದೂರಿನಂತೆ ವಿಟ್ಲ ಠಾಣಾ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...