Tuesday, February 11, 2025

ಗೋವು ವಧೆ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಸಜೀಪ ನಡುವಿನಲ್ಲಿ ಅಕ್ರಮವಾಗಿ ಗೋವು ವಧೆ ಮಾಡಿ ಮಾರಾಟಕ್ಕೆ ಸಿದ್ದಪಡಿಸುತ್ತಿದ್ದ ವೇಳೆ ದಾಳಿ ನಡೆಸಿ ದ ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಇಬ್ಬರು ಆರೋಪಿಗಳನ್ನು ಬಂಧಿಸಿ, ಪರಾರಿಯಾದ ಒರ್ವ ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.


ಕಡಬ ಪುತ್ತೂರು ತಾಲೂಕಿನ ಕೋಡಿಂಬಾಳ ಗ್ರಾಮದ ಕೆಂಚಬಟ್ರ ನಿವಾಸಿ ದಿ.ಮಹಮ್ಮದ್ ಅವರ ಪುತ್ರ ಆಸೀಫ್ (31), ಹಾಗೂ ಪುತ್ತೂರು ತಾಲೂಕಿನ ಕೊಂಡಿಬಾಳ ಗ್ರಾಮದ ಪನ್ಯ ಬಾಜಿನಡಿ ನಿವಾಸಿ ಉಮ್ಮರ್ ಅವರ ಪುತ್ರ ಆಸಿರ್ ( 25) ಬಂಧಿತ ಆರೋಪಿ.‌
ಸಜೀಪ ನಡು ಗ್ರಾಮದ ಗೋಳಿಪಡ್ಪು ಎಂಬಲ್ಲಿ ಉಮ್ಮರ್ ಎಂಬವರ ಮನೆಯ ಹಿಂಬದಿಯ ಖಾಲಿ ಜಮೀನಿನಲ್ಲಿ ಮಾರಾಟ ಮಾಡಿ ಹಣ ಮಾಡುವ ಉದ್ದೇಶದಿಂದ ಜಾನುವಾರು ಒಂದನ್ನು ಕಡಿದು ಮಾಂಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಇಂದು ಮದ್ಯಾಹ್ನ ವೇಳೆ ದಾಳಿ ನಡೆಸಿ ದಾಗ ಸ್ಥಳದಲ್ಲಿ ಮೂವರು ಆರೋಪಿಗಳು ಜಾನುವಾರು ಕೊಂದು ಮಾಂಸ ಮಾಡುತ್ತಿದ್ದು ಅದರಲ್ಲಿ ಪೋಲೀಸರನ್ನು ನೋಡಿ ಒರ್ವ ಆರೋಪಿ ಸ್ಥಳೀಯ ಗೋಳಿಪಡ್ಪು ನಿವಾಸಿ ಉಸ್ಮಾನ್ ಅವರ ಮಗ ಹೈದರ್ ( 40) ಸ್ಥಳದಿಂದ ಪರಾರಿಯಾಗಿದ್ದಾನೆ.
ಸುಮಾರು ಏಳು ಸಾವಿರ ರೂ ಮೌಲ್ಯ ದ ಕಡಿದು ಮಾಂಸ ಮಾಡಲು ಸಿದ್ದವಾದ ಜಾನುವಾರು, ಕಡಿದು‌ಮಾಂಸ ಮಾಡಲು ಉಪಯೋಗಿಸಿ ದ ಸಲಕರಣೆಗಳನ್ನು ವಶಪಡಿಸಿಕೊಂಡ ಪೋಲೀಸರು ಆರೋಪಿ ಗಳ ವಿರುದ್ಧ ಕಲಂ.4,5,11 ಕರ್ನಾಟಕ ಗೋವಧೆ ಪ್ರತಿಬಂಧಕ ಕಾಯ್ದೆ ಹಾಗೂ ಕಲಂ.11 ಪ್ರಾಣಿ ಹಿಂಸೆ ತಡೆಕಾಯ್ದೆ 1960 ರಂತೆ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಚರಣೆ ಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸ್ ಸಿಬ್ಬಂದಿ ಗಳಾದ ಜನಾರ್ಧನ, ಸುರೇಶ್, ಜಯರಾಮ, ಸುಬ್ರಹ್ಮಣ್ಯ ಪಾಲ್ಗೊಂಡಿದ್ದರು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...