ಬಂಟ್ವಾಳ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಮದ್ಯ ಸಹಿತ ವಶಕ್ಕೆ ಪಡೆದ ಘಟನೆ ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ಮಾಡಂಗೆಯಲ್ಲಿ ಮಾ. 26ರಂದು ನಡೆದಿದೆ.
ಪ್ರಕರಣದ ಕುರಿತು ಖಚಿತ ಮಾಹಿತಿ ಪಡೆದ ಬಂಟ್ವಾಳ ಅಪರಾಧ ವಿಭಾಗದ ಪಿಎಸ್ಐ ಕುಮಾರ್ ಕಾಂಬ್ಳೆ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದ್ದು, ಆರೋಪಿ ಸ್ಥಳೀಯ ನಿವಾಸಿ ನಾರಾಯಣ ಪೂಜಾರಿ ಎಂಬಾತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.
ಆರೋಪಿಯಿಂದ 3.600 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


