ಬಂಟ್ವಾಳ: ಕೋವಿಡ್ 19 ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ಸಿ.ಐ.ನೇತ್ರತ್ವದ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದೆ ಉಳಿದ ಆರೋಪಿಗಳಿಗಾಗಿ ಬಲೆಬೀಸಿದೆ.


ಬಾರೆಕಾಡು ನಿವಾಸಿ ರಫೀಕ್ ಮತ್ತು ಮಹಮ್ಮದ್ ಹ್ಯಾರಿಸ್ ಬಂಧಿತ ಆರೋಪಿ ಗಳು.


ಲಾಕ್ ಡೌನ್ ಅವಧಿಯಲ್ಲಿ ಗುಂಪು ಕಟ್ಟಿಕೊಂಡು ಅಂಗಡಿಗಳನ್ನು ತೆರೆದಿಟ್ಟಲ್ಲದೆ ಜೊತೆಗೆ ಪ್ರಶ್ನಿಸಿದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಬಗ್ಗೆ ಪ್ಲೈಯಿಂಗ್ ಸ್ವ್ಕಾಡ್ ನ ಮಹಿಳಾ ಅಧಿಕಾರಿ ಯೋರ್ವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಮಧ್ಯಾಹ್ನ ದೂರು ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಕಾರ್ಯಚರಣೆ ಗಿಳಿದ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ
ಬಂಟ್ವಾಳ ಡಿ.ವೈ.ಎಸ್.ಪಿ.ಯವರ ನಿರ್ದೇಶನದಂತೆ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಎರಡು ಎಸ್.ಐ.ಗಳ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಉಳಿದಿರುವ ಆರೋಪಿಗಳಿಗಾಗಿ ಶೋಧಕಾರ್ಯಮುಂದುವರಿದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಉಳಿದವರ ಮಾಹಿತಿ ಲಭ್ಯವಾಗಿದ್ದು ಅವರ ಬಂಧನ ಶೀಘ್ರವಾಗಿ ಮಾಡುವುದಾಗಿಯೂ ತಿಳಿಸಿದ್ದಾರೆ.












