Thursday, June 26, 2025

ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ: ನಾಲ್ವರ ಬಂಧನ

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ ನಿವಾಸಿಗಳಾದ ಧನುಷ್ ಆಚಾರ್ಯ ಹಾಗೂ ಕೀರ್ತನ್ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಕಸಬಾ ಗ್ರಾಮದ ತುಂಬ್ಯಾ ಜಂಕ್ಷನ್ ಬಳಿ ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಅಪಘಾತ ಉಂಟಾದ ಕಾರಣಕ್ಕೆ ಸ್ಥಳಕ್ಕೆ ಬಂದ ಸ್ಥಳೀಯ ಯುವಕರು ಮತ್ತು ಆಟೋ ರಿಕ್ಷಾ ಸಂಬಂಧಿಗಳು ಒಬ್ಬರಿಗೊಬ್ಬರು ಗಲಾಟೆ ಮಾಡಿಕೊಂಡಿದ್ದಾರೆ.

ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಜನರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...