Monday, January 26, 2026

ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ಅಕ್ರಮವಾಗಿ ದನಗಳ ಸಾಗಾಟ: ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದ ತಂಡದಿಂದ ಕಾರ್ಯಚರಣೆ, ಓರ್ವ ಆರೋಪಿ ಬಂಧನ

ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಕಟ್ಟಿ ಹಾಕಿ ಗೂಡ್ಸ್ ರಿಕ್ಷಾ ಟೆಂಪೋದಲ್ಲಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿ ದ ಗ್ರಾಮಾಂತರ ಎಸ್ ಐ ಹರೀಶ್ ನೇತೃತ್ವದ ಪೋಲಿಸ್ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಹಾಗೂ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಕಾರ್ಯ ಚರಣೆ ವೇಳೆ ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಅಬ್ದುಲ್ ಹಮೀದ್ ಬಂಧಿತ ಆರೋಪಿ ಯಾಗಿದ್ದು, ಅಬ್ಬಾಸ್ ಪಾರಾರಿಯಾಗಿದ್ದಾನೆ.
ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮನೆಕಳ್ಳತನ ಹಾಗೂ ದನ ಕಳ್ಳತನ ಪ್ರಕರಣಗಳನ್ನು ಕಂಡು ಬಂದಿದ್ದು ಈ ಹಿನ್ನೆಲೆ ಯಲ್ಲಿ ಗ್ರಾಮಾಂತರ ಠಾಣಾ ಎಸ್. ಐ
ಹರೀಶ್ ನೇತೃತ್ವದ ತಂಡ ರಾತ್ರಿ ರೌಂಡ್ಸ್ ಕಾರ್ಯಚರಣೆ ನಡೆಸುತ್ತಿದ್ದರು.
ಈ ವೇಳೆ ಬೆಳಗಿನ ಜಾವ 5 ಗಂಟೆ ಗೆ ಮಂಚಿಕಟ್ಟೆಯಲ್ಲಿ ವಾಹನವೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಲು ಮುಂದಾದಾಗ ಚಾಲಕ ವಾಹನ ನಿಲ್ಲಿಸದೆ ಮುಂದೆ ಹೋದ, ಕೂಡಲೆ ಪೋಲಿಸ್ ವಾಹಮ ಬೆನ್ನಟ್ಟಿ ವಾಹನ ತಡೆದು ನಿಲ್ಲಿಸಿದಾಗ ಚಾಲಕನ ಬದಿಯ ಸೀಟಿನಲ್ಲಿ ಕುಳಿತ ಆರೋಪಿ ಟೆಂಪೋ ದಿಂದ ಹಾರಿ ಓಡಿ ಹೋಗಿದ್ದಾನೆ.
ಅದಾಗಲೇ ಕಾರ್ಯಪ್ರವೃತ್ತರಾದ ಪೋಲಿಸರು ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ದನಗಳನ್ನು ವದೆ ಮಾಡುವ ಉದ್ದೇಶದಿಂದ ಸಾಗಿಸುವ ಬಗ್ಗೆ ಒಪ್ಪಿಕೊಂಡಿದ್ದಾನೆ.
ಟೆಂಪೋ ಸಹಿತ ಜಾನುವಾರುಗಳ ಒಟ್ಟು ಮೌಲ್ಯ 1,50,000 ಆಗಿದೆ.
ಒಂದು ದನ ಹಾಗೂ ಎರಡು ಗಂಡು ಕರುಗಳನ್ನು ಕೈಕಾಲು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...