ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಮಾರ್ಚ್ 15 ರಂದು ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಅಂತ್ಯವಾದಂತಾಗಿದೆ.
ಇನ್ನು ಪ್ರಮುಖವಾಗಿ ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಪಕ್ಷ ಪುತ್ತಿಲ ಅವರಿಗೆ ಯಾವ ಹುದ್ದೆ ನೀಡುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ.