ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಪಕ್ಷದ ನಾಯಕರಾದ ಯಡಿಯೂರಪ್ಪ, ಸಂತೋಷ್ ಜಿ, ವಿಜಯೇಂದ್ರ, ಸತೀಶ್ ಕುಂಪಲ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಮಾತುಕತೆ ನಡೆದಿತ್ತು. ಎಲ್ಲರಿಂದಲೂ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಅದರೆ ಇಲ್ಲಿನ ತನಕ ಯಾವ ನಿರ್ಧಾರವನ್ನು ಅವರು ಕೈಗೊಂಡಿಲ್ಲ. ಹಾಗಾಗಿ ಪುತ್ತಿಲ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.
ಇನ್ನು ಬಹಿರಂಗವಾಗಿ ಮಂಡಲ ಅಧ್ಯಕ್ಷ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು ಆದರೆ ಅದ್ಯಾವುದು ಸಫಲವಾಗಿಲ್ಲ. ಕಾರ್ಯಕರ್ತರ ಒತ್ತಾಸೆಯಂತೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪರಿವಾರದ ವಕ್ತಾರ ಕೃಷ್ಣ ಉಪಾದ್ಯಾಯ, ಉಪಾದ್ಯಕ್ಷ ಮಹೇಂದ್ರ ವರ್ಮ, ನಗರ ಅಧ್ಯಕ್ಷ ಅನಿಲ್ ತೆಂಕಿಲ, ಕೋಡಿಬೈಲು ಉಪಸ್ಥಿತರಿದ್ದರು.