Thursday, July 10, 2025

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಖಂಡನೀಯ ಅಂತವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ: ವಿಜಯಲಕ್ಮೀ

ಬಂಟ್ವಾಳ
ಕರೋನಾ ವೈರಸ್ ವಿರುದ್ಧ ನಮ್ಮ ಆರೋಗ್ಯದ ಬಗ್ಗೆಯೂ ಲೆಕ್ಕಿಸದೆ ಮನೆ ಮನೆಗೆ ತೆರಳುತ್ತಿರುವ ಸಂದರ್ಭ ದುಷ್ಕರ್ಮಿಗಳು ಹಲ್ಲೆ ನಡೆಸುತ್ತಿರುವುದು ಆತಂಕಕಾರಿ. ನಮಗೆ ರಕ್ಷಣೆ ನೀಡಿ, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಭಾರತೀಯ ಆಶಾ ಕಾರ್ಯಕರ್ತೆಯರ ಸಂಘ (ಬಿಎಂಎಸ್ ಸಂಯೋಜಿತ) ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ರಾಜ್ಯ ಸಹಕಾರ್ಯದರ್ಶಿ ವಿಜಯಲಕ್ಷ್ಮೀ ಹೇಳಿದ್ದಾರೆ.
ರಾಜ್ಯದಲ್ಲಿ 48 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದೇವೆ. ಕರೋನಾ ವೈರಸ್ ವಿರುದ್ಧ ನಮ್ಮ ಆರೋಗ್ಯದ ಬಗ್ಗೆ ಲೆಕ್ಕಿಸದೆ ಕೆಲಸ ಮಾಡುತ್ತಿದ್ದು, ಹಗಲು ಬಿಸಿಲಿನ ಝಳವಿದ್ದರೂ ಅದರೊಂದಿಗೆ ಮನೆ ಮನೆಗೆ ಹೆಜ್ಜೆ ಹಾಕುತ್ತಿದ್ದೇವೆ. ಬೇರೆ ಬೇರೆ ಊರು, ವಿದೇಶ, ರಾಜ್ಯಗಳಿಂದ ಬಂದವರಿಗೆ ಸೂಚನೆ ನೀಡುವ ಕಾರ್ಯವನ್ನು ಇಲಾಖೆ ನಿರ್ದೇಶನದಂತೆ ಮಾಡುತ್ತಿದ್ದೇವೆ. ಆದರೆ ಯಾವುದೇ ಭದ್ರತೆ ನಮಗಿಲ್ಲ ಎಂದಿರುವ ಅವರು, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಯಾಗುತ್ತಿರುವುದು ಆತಂಕಕಾರಿ. ಕೆಲವೆಡೆ ಆರೋಗ್ಯ ರಕ್ಷಣೆ ಕುರಿತು ನಮ್ಮ ಸೂಚನೆಗಳಿಗೆ ಸಹಕಾರವನ್ನೂ ನೀಡುತ್ತಿಲ್ಲ ಎಂದಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದವರು ಎಚ್ಚರಿಸಿದ್ದಾರೆ. ಸರ್ಕಾರ ಗಂಭೀರವಾಗಿ ತೀರ್ಮಾನ ಕೈಗೊಂಡು, ಕಾರ್ಯಕರ್ತೆಯರಿಗೆ ಭದ್ರತೆ ಒದಗಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷೆ ಗಾಯತ್ರಿ, ರಾಜ್ಯ ಕಾರ್ಯದರ್ಶಿ ರೇವತಿ, ಸಹಕಾರ್ಯದರ್ಶಿ ವಿಜಯಲಕ್ಷ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...