Tuesday, January 27, 2026

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ ಸರಕಾರಿ ಪ್ರೌಢ ಶಾಲೆಯ 14 ವಿದ್ಯಾರ್ಥಿಗಳು,ಸಹರಾ ಆಂಗ್ಲ ಮಾಧ್ಯಮ ಸ್ಕೂಲ್‌ ನ ಇಬ್ಬರು ವಿದ್ಯಾರ್ಥಿನಿಗೆ, ಸೈಂಟ್‌ ಡೋಮೇನಿಕ್‌ ಸ್ಕೂಲ್‌ ನ ಮೂವರು ವಿದ್ಯಾರ್ಥಿಗಳಿಗೆ, ಓಂ ಜನಹಿತಾಯ ಅರಳ ಸ್ಕೂಲ್‌ ಒರ್ವ ವಿದ್ಯಾರ್ಥಿಗೆ ಸುಮಾರು ೨೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಆಸರೆ ಸೇವಾ ಫೌಂಡೇಶನ್ ವತಿಯಿಂದ ನೀ ಡಲಾಯಿತು.

ಸಭೆಯ ಅಧ್ಯಕ್ಷತೆ ಅಬುಸಾಲಿ ಪಂಚಮೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾತಾ ಎಜುಕೇಶನ್ ‌ಟ್ರಸ್ಟ್‌ ಕದ್ರಿ ಮಂಗಳೂರು ಇಲ್ಲಿಯ ಶಾಖಾ ಪ್ರಬಂಧಕರಾದ ಶೈಲೇಶ್ ಶುಭಹಾರೈಸಿದರು.

ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧ ಲೋಕೇಶ್ , ಬಂಟರ ಸಂಘ ಬೆಳ್ಳೂರು ವಲಯದ ಅಧ್ಯಕ್ಷ ರಾಧಾಕೃಷ್ಣರೈ ಮುಗುಳ್ಯ ,ಪೊಳಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಬ್ರಾಯ ಪೈ, ಕೃಷಿಪತ್ತಿನಸಹಕಾರ ಸಂಘದ ಉಪಾಧ್ಯಕ್ಷ ಗೋಪಾಲ್ ಅಂಚನ್ ಬಡಕಬೈಲ್ ಮಾತನಾಡಿ ಶುಭ ಹಾರೈಸಿದರು.

ಸಂಸ್ಥೆಯ ಟ್ರಸ್ಟಿಗಳು ಹಾಗೂ ಸದಸ್ಯರು ಮತ್ತು ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ಆಸರೆ ಸೇವಾ ಫೌಂಡೇಶನ್ ಇದರ ಅಧ್ಯಕ್ಷರಾದ ಚಂದ್ರಹಾಸ್ ಪಲ್ಲಿಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಸ್ಥೆಯ ಗೌರವಾಧ್ಯಕ್ಷರಾದ ರಾಜು ಕೋಟ್ಯಾನ್ ಸ್ವಾಗತಿಸಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಶೀರ್ ಗಾಣೆಮಾರ್ ವಂದಿಸಿದರು. ಇಬ್ರಾಹಿಂ ನವಾಜ್ ಬಡಕಬೈಲ್ ಕಾರ್ಯಕ್ರಮ ನಿರೂಪಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...