ಬಂಟ್ವಾಳ: ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸಜೀಪ ಮುನ್ನೂರು, ಮಾಣಿ, ಗೋಳ್ತಮಜಲು, ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದ ಎಲ್ಲಾ ಆಶಾ ಕಾರ್ಯಕರ್ತರಿಗೆ ಗೌರವರ್ಪಣೆ…


ಊರಿನ ಜನರಲ್ಲಿ ಕೊವಿಂಡ್ 19 ಬಗ್ಗೆ ಜಾಗೃತಿ ಮೂಡಿಸಿ ಗ್ರಾಮದ ಆರೋಗ್ಯಕ್ಕಾಗಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಮಾಜಿ ಸಚಿವರು ಶಾಲು ಹಾಕಿ ದಿನ ಬಳಕೆ ಸಾಮಗ್ರಿಳನ್ನು ನೀಡಿ ಗೌರವಿಸಿದರು ಮೊದಲನೇಯದು ಮಾಜಿ ಸಚಿವರ ನಿವಾಸದಲ್ಲಿ ಎರಡನೇಯದು ಮಂಚಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಮೂರನೇಯದು ಮಾಣಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ನಡೆಯಿತು
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಎಂ ಎಸ್ ಮೊಹಮ್ಮದ್ ಮತ್ತು ಶ್ರೀಮತಿ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಎ.ಪಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ರೈ,ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಕುಶಲ,ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು












