Wednesday, February 4, 2026

ಎ.ಎಸ್.ಐ.ಜಯರಾಮ ರೈ ಇನ್ನಿಲ್ಲ

ಬಂಟ್ವಾಳ: ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಎ.ಎಸ್.ಐ.ರೊರ್ವರು ಹೃದಯಾಘಾತದಿಂದ ಮೃತ ಘಟನೆ ನಡೆದಿದೆ.

ಮಂಚಿ ನಿವಾಸಿ ಬಂಟ್ವಾಳ ನಗರ ಠಾಣಾ ಎ.ಎಸ್.ಐ.ಜಯರಾಮ ರೈ (58)ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

ಅವರು ಕೆಲ ದಿನಗಳಿಂದ ಬೆನ್ನು ನೋವು ಸಮಸ್ಯೆ ಯಿಂದ ಬಳಲುತ್ತಿದ್ದು ಒಂದು ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು .

ಆದರೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಇವರು ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಕ್ಲಿಷ್ಟಕರವಾದ ಪರಿಸ್ಥಿತಿ ಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ.

ಅವರು ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಎ.ಎಸ್.ಐ.ಅಗಿ ಕರ್ತವ್ಯ ಮಾಡುತ್ತಿದ್ದರು.

ಉತ್ತಮವಾದ ನಡತೆಯ ಒಬ್ಬ ನಿಷ್ಠಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...