Saturday, January 31, 2026

ಸಂಚಾರ ನಿಯಮ ಪಾಲಿಸದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಎ.ಎಸ್.ಪಿ.ಸೈದುಲು ಅಡಾವತ್

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ. ಹಾಗೂ ಬಂಟ್ವಾಳ ಸಾರಿಗೆ ಅಧಿಕಾರಿಗಳಿಂದ ಏಕಕಾಲದಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ದ ಕಾರ್ಯಾಚರಣೆ ನಡೆಸಿದರು.


ಬಂಟ್ವಾಳ ಡಿ.ವೈ.ಎಸ್.ಪಿ.ಸೈದುಲ್ ಅಡಾವತ್ ಅವರ ನಿರ್ದೇಶನ ದಂತೆ ಬಂಟ್ವಾಳ ಸಬ್ ಡಿವಿಷನ್ ವಿಭಾಗದಲ್ಲಿ ಏಕಕಾಲದಲ್ಲಿ ಸುಮಾರು 22 ಅಧಿಕಾರಿಗಳು ‌ರಸ್ತೆಗಿಳಿದು ವಾಹನ ತಪಾಸಣೆ ನಡೆಸಿ ದ್ವಿಚಕ್ರ ಹಾಗೂ ಘನಗಾತ್ರದ ವಾಹನಗಳು ಸೇರಿದಂತೆ ಸುಮಾರು 800 ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಈ ಒಟ್ಟು ಪ್ರಕರಣ ಗಳಲ್ಲಿ 1.25 ಲಕ್ಷ ರೂ ದಂಡ ವಿಧಿಸಿದ್ದಾರೆ.
ವಾಹನಗಳ ದಾಖಲಾತಿ ಇಲ್ಲದೆ ಮತ್ತು ವಿಮೆ ಇಲ್ಲದ 80 ವಾಹನಗಳ ನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಹಾಗೂ 40 ವಾಹನಗಳನ್ನು ಜಪ್ತಿ ಮಾಡಲಾಗಿದೆ .
ಡಿ.ವೈಎಸ್.ಪಿ.ಸೈದುಲು ಅಡಾವತ್ ಅವರು ಸ್ವತಃ ರಸ್ತೆಗಳಿದುದಲ್ಲದೆ, ಬಂಟ್ವಾಳ, ಬೆಳ್ತಂಗಡಿ, ವಿಟ್ಲದ ಗಲ್ಲಿಗಲ್ಲಿಗಳಲ್ಲಿ ಪೋಲೀಸ್ ಅಧಿಕಾರಿಗಳು ವಾಹನಗಳ ತಪಾಸಣೆ ನಡೆಸಿದರು.
ಈ ಮೂಲಕ ಟ್ರಾಫಿಕ್ ರೂಲ್ ಪಾಲಿಸದ ವಾಹನ ಸವಾರರಿಗೆ ಸಂದೇಶ ರವಾನೆ ಮಾಡುವ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸದೆ ಪ್ರಯಾಣಿಸುವ ವಾಹನ ಸವಾರರಿಂದ ಹಿಡಿದು ವಿಮೆ, ಹಾಗೂ ವಾಹನ ಪಿಟ್ ನೆಸ್ ವರೆಗೂ ತಪಾಸಣೆ ನಡೆಸಿ ವಾಹನ ಸವಾರರ ಬೆವರಿಳಿಸಿದರು.
ಎರಡು
ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಸಹಿತ ಅನೇಕ ಘನಗಾತ್ರದ ವಾಹನಗಳಿಗೆ ಕೇಸು ದಾಖಲಿಸಿದರು.
ಇನ್ನು ಮುಂದೆ ಸಂಚಾರ ಮಾಡುವ ವೇಳೆ ಕಾನೂನು ಪಾಲಿಸುವಂತೆ ಎಚ್ಚರಿಕೆಯ ಸಂದೇಶ ವನ್ನು ಅವರು ನೀಡಿದ್ದಾರೆ.
ಬಂಟ್ವಾಳ ಸಾರಿಗೆ ಅಧಿಕಾರಿ ಚರಣ್ , ಬಂಟ್ವಾಳ ನಗರ ಠಾಣಾಧಿಕಾರಿ ಚಂದ್ರಶೇಖರ್, ಗ್ರಾಮಾಂತರ ಎಸ್ .ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ಮಂಜುಳಾ, ವಿಟ್ಲ ಎಸ್.ಐ.ಯಲ್ಲಪ್ಪ, ಹಾಗೂ ಸಿಬ್ಬಂದಿ ಗಳು ಪಾಲ್ಗೊಂಡಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...