Saturday, February 8, 2025

ಡಾಂಬರು ಕಳವು ಆರೋಪಿಗಳನ್ನು ಬಂಧಿಸಿದ ಗ್ರಾಮಾಂತರ ಠಾಣಾ ಪೋಲೀಸರು

ಬಂಟ್ವಾಳ: ಡಾಂಬರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು  ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಬಂಧಿಸಿದ್ದಾರೆ.ಪುತ್ತೂರು ಸಮೀಪದ ಆದರ್ಶನಗರದ  ನೆಕ್ಕಿಲಾಡಿ ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಉಮ್ಮರುಲ್ ಫಾರೂಕ್ ಮತ್ತು ವಿಟ್ಲ ಕಸ್ಬ ಮೇಗಿನಪೇಟೆ ತಾಜುದ್ದೀನ್ ಅವರ ಪುತ್ರ ಮಹಮ್ಮದ್ ಆಶ್ರಫ್ ಬಂಧಿತ ಆರೋಪಿಗಳು.

ಪ್ರಕರದ ಹಿನ್ನೆಲೆ: ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ರಸ್ತೆ ಡಾಮರೀಕರಣಕ್ಕೆಂದು ದಾಸ್ತಾನು ಇರಿಸಲಾಗಿದ್ದ ಸುಮಾರು 3.5 ಲಕ್ಷ ಮೌಲ್ಯದ ಡಾಂಬರು ಡಬ್ಬಿಗಳನ್ನು 2017 ರ ಡಿಸೆಂಬರ್ ತಿಂಗಳನಲ್ಲಿ ಕಳವು ಮಾಡಲಾಗಿತ್ತು.

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಾರ್ಯಚರಣೆ ಮಾಡಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ಎರಡು ಜನ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಳಿದಂತೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳು ಬಾಕಿಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಗಳ ಬಂಧನಕ್ಕೆ ಬಲೆಬೀಸಿದ್ದಾರೆ.ಎಸ್.ಪಿ.ರವಿಕಾಂತೇ ಗೌಡ ನಿರ್ದೇಶನ ದಂತೆ ಹೆಚ್ಚುವರಿ ಪೋಲೀಸ್ ಅಧೀಕ್ಷರಾದ ಸಜಿತ್ ವಿ.ಜೆ. ಹಾಗೂ ಬಂಟ್ವಾಳ ಉಪವಿಭಾಗದ ಸಹಾಯ ಕ ಪೋಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ ಮಾರ್ಗದರ್ಶನದಲ್ಲಿ ಬಂಟ್ವಾಳ ಸಿ.ಐ. ಟಿ.ಡಿ.ನಾಗರಾಜ್ ಮತ್ತು ಬಂಟ್ವಾಳ ಗ್ರಾಮಾಂತರ ಉಪನಿರೀಕ್ಷಕರಾದ ಪ್ರಸನ್ನ, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.‌ ಹರೀಶ್ ಎಂ.ಆರ್.ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.



More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...