ಬಂಟ್ವಾಳ: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಪುಲ್ಲೇರಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಪುಲ್ಲೇರಿ ಎಂಬಲ್ಲಿ ಮನೆಯಲ್ಲಿ ಅಪ್ರಾತ್ತ ಬಾಲಕಿ ಒಬ್ಬ ಲೇ ಇರುವ ವೇಳೆ ಆರೋಪಿ ಸತೀಶ್ ಪೂಜಾರಿ ಎಂಬಾತ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಪುಂಜಾಲಕಟ್ಟೆ ಠಾಣೆಯ ಲ್ಲಿ ದೂರು ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೋಲೀಸರು ಆರೋಪಿಯ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.

