ಬಂಟ್ವಾಳ: ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ಆ.4ರಂದು ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಏರ್ಪಡಿಲಾಗಿದೆ. ಬಿಲ್ಲವ ಸಮಾಜ ಸೇವಾ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಕೂಟವನ್ನು ಉದ್ಘಾಟಿಸುವರು. ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಪುರುಷೋತ್ತಮ ಕಾಯರ್‌ಪಲ್ಕೆ ಅವರ “ಆಟಿದ ಅಟಿಲ್” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದು ಯುವ ವಾಹಿನಿಯ ಪಕಟನೆ ತಿಳಿಸಿದೆ.
