Thursday, January 29, 2026

ಮೆಡಿಕಲ್ ಶಾಪ್ ಸಹಿತ 4 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಿದ ಬಂಟ್ವಾಳ ಎಸ್.ಐ‌.ಅವಿನಾಶ್ ಹೆಚ್ ಗೌಡ.

 ಬಂಟ್ವಾಳ: ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯವಹಾರ ಮಾಡುತ್ತಿದ್ದ ಬಂಟ್ವಾಳ ನಗರಪೋಲೀಸ್ ಠಾಣಾ ವ್ಯಾಪ್ತಿಯ ಮೆಡಿಕಲ್ ಶಾಪ್ ಸಹಿತ 4 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಿದ ಬಂಟ್ವಾಳ ಎಸ್.ಐ‌.ಅವಿನಾಶ್ ಹೆಚ್ ಗೌಡ.
ಕೇಂದ್ರ ಹೊಸ ನೀತಿಯ ಅನ್ವಯ ದಂತೆ ಪೋಲೀಸರು ಹೆಚ್ಚಿನ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು , ಸರಕಾರದ ನಿಯಮ ಪಾಲಿಸದೆ ಗುಂಪು ಸೇರಿಸಿ ವ್ಯಾಪಾರ ಮಾಡುತ್ತಿದ್ದ ಎರಡು ಮೆಡಿಕಲ್ ಶಾಪ್, ಒಂದು ದಿನಸಿ‌ ಅಂಗಡಿ ಹಾಗೂ ಒಂದು ತರಕಾರಿ ಅಂಗಡಿಗಳಿಗೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೋಟೀಸ್ ಜಾರಿ ಮಾಡಿದ್ದಾರೆ.
ಪ್ರತಿ ಅಂಗಡಿಯವರು ವ್ಯಾಪಾರ ನಡೆಸುವ ವೇಳೆ ಸರಕಾರದ ಅದೇಶವನ್ನು ಪಾಲಿಸಿಕೊಂಡು , ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅವರು ಮನವಿ ಮಾಡಿದ್ದಾರೆ.
ಅಂಗಡಿ ಬಾಗಿಲಿನಲ್ಲಿ ಬ್ಯಾಂಕ್ ಗಳಲ್ಲಿ ಗುಂಪು ಸೇರಿದರೆ ಕಾನೂನು ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ವಿಟ್ಲದಲ್ಲಿಯೂ ಎರಡು ತರಕಾರಿ ಅಂಗಡಿಗಳಿಗೆ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ನೋಟೀಸ್ ನೀಡಿದ್ದರು.ಅದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಇವತ್ತು ಅಂಗಡಿಯನ್ನು ಪೋಲೀಸರು ಬಂದ್ ಮಾಡಿಸಿದ್ದಾರೆ

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...