Wednesday, January 28, 2026

ಅಯೋಧ್ಯೆ: ಐತಿಹಾಸಿಕ ರಾಮ ಮಂದಿರದ ಭೂಮಿ ಪೂಜೆ ನರೆವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಅಯೋಧ್ಯೆಯ ಐತಿಹಾಸಿಕ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇರಿಸುವ ಮೂಲಕ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದಾರೆ.
ಸಮಸ್ತ ದೇಶದ ಪ್ರತಿನಿಧಿಯಾಗಿ, ನರೇಂದ್ರ ಮೋದಿ ಹೆಸರಿನ ನಾನು ದೇಶದ ಪ್ರತಿನಿಧಿಯಾಗಿ ಭೂಮಿಪೂಜೆ ಮಾಡುತ್ತೇನೆ ಎಂದು ಮೋದಿ ಸಂಕಲ್ಪ ಮಾಡಿದರು.
ನಂತರ ಮಾತನಾಡಿದ ಅವರು ”ದೇಶಕ್ಕೆ ಇದು ಭಾವನಾತ್ಮಕ ಕ್ಷಣ, ಪ್ರತಿ ಹೃದಯವು ಪ್ರಕಾಶಿಸಿದೆ” ಎಂದು ಹೇಳಿದ್ದಾರೆ.
‘ಈ ಸಂದರ್ಭದಲ್ಲಿ ದೇಶದ ಪ್ರತಿ ಹೃದಯವು ಪ್ರಕಾಶಿಸುತ್ತಿದ್ದು ಇದು ದೇಶಕ್ಕೆ ಭಾವನಾತ್ಮಕ ಕ್ಷಣ. ಬಹು ಕಾಲದಿಂದ ಕಾಯುತ್ತಿದ್ದ ದಿನ ಇಂದು ಮುಕ್ತಾಯ ಕಂಡಿದೆ. ರಾಮ ಜನ್ಮ ಭೂಮಿಯಾದ ಅಯೋಧ್ಯೆಯಲ್ಲಿ ನಮ್ಮ ರಾಮ ಲಲ್ಲಾನಿಗೆ ಭವ್ಯ ರಾಮ ಮಂದಿರವು ನಿರ್ಮಾಣವಾಗುತ್ತದೆ” ಎಂದರು. ಈ ರಾಮ ಮಂದಿರ ನಿರ್ಮಾಣದಿಂದಾಗಿ ಬರೀ ಇತಿಹಾಸ ನಿರ್ಮಾಣವಾಗುವುದಿಲ್ಲ ಬದಲಾಗಿ ಇತಿಹಾಸ ಪುನಾರಾವರ್ತನೆಯಾಗುತ್ತದೆ. ಭಗವಂತ ರಾಮನಿಗೆ ಬುಡಕಟ್ಟು ಜನಾಂಗ, ಮೀನುಗಾರರು ಸಹಾಯ ಮಾಡಿದ್ದಂತೆ, ಭಗವಂತ ಕೃಷ್ಣನಿಗೆ ಮಕ್ಕಳು ಗೋವರ್ಧನ ಪರ್ವತ ಎತ್ತಲು ಸಹಾಯ ಮಾಡಿದ್ದಂತೆ, ನಮ್ಮೆಲ್ಲರ ಸಹಾಯದಿಂದ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನು ಅಯೋಧ್ಯೆ ರಾಮ ಮಂದಿರದ ಕುರಿತು, ದೇವಾಲಯದ ಮುಖ್ಯ ವಾಸ್ತುಶಿಲ್ಪಿ ಸಿ.ಸೊಂಪುರ ಅವರ ಪುತ್ರ ಹಾಗೂ ವಾಸ್ತುಶಿಲ್ಪಿ ನಿಖಿಲ್ ಸೊಂಪುರ ಅವರು, ಸುಮಾರು 161 ಅಡಿ ಎತ್ತರದ ಭವ್ಯ ರಾಮ ಮಂದಿರದ ನಿರ್ಮಾಣ ಕಾಮಗಾರಿಯು ಸುಮಾರು 3 ರಿಂದ 3.5 ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಭೂ ವ್ಯಾಜ್ಯ ಪ್ರಕರಣದಲ್ಲಿ ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ದೇಗುಲದ ಮೂಲ ಯೋಜನೆಯನ್ನು ಬದಲಿಸಿ ಹೊಸ ಯೋಜನೆ ಸಿದ್ಧಪಡಿಸಲಾಗಿದೆ. ”ಈ ಮೊದಲು ಸುಮಾರು 141 ಅಡಿ ಎತ್ತರದ ರಾಮಮಂದಿರ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಇದನ್ನು 20 ಅಡಿ ಹೆಚ್ಚಳ ಮಾಡಿ 161 ಅಡಿ ಎತ್ತರದ ಮಂದಿರ ನಿರ್ಮಿಸಲಾಗುವುದು” ಎಂದು ತಿಳಿಸಿದ್ದಾರೆ. ”ಹಾಗೆಯೇ ರಾಮಮಂದಿರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆ ಎತ್ತರವನ್ನು ಹೆಚ್ಚಿಸಲಾಗಿದೆ” ಎಂದಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...