Thursday, January 29, 2026

ಕುಟುಂಬ ಸಮೇತರಾಗಿ ಅಯೋಧ್ಯೆಗೆ ‌ಶಾಸಕ‌ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ಬಂಟ್ವಾಳ ‌ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ಬೇಟಿ ನೀಡಿ ಶ್ರೀರಾಮ ದೇವರ ಆಶ್ರೀರ್ವಾದ ಪಡೆದಿದ್ದಾರೆ.

ಶ್ರೀರಾಮಚಂದ್ರನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲೋತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಪುಣ್ಯ ಕಾರ್ಯದಲ್ಲಿ ಸೇವಾಕರ್ತರಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ರವರು ಕುಟುಂಬ ಸಮೇತರಾಗಿ ಭಾಗವಹಿಸಿ ಶ್ರೀರಾಮನ ಸೇವಾಗೈದು, ಶ್ರೀರಾಮನ ಆಶೀರ್ವಾದ ಪಡೆದರು.

ಶಾಸಕರ ಪತ್ನಿ ಉಷಾ ಆರ್.ನಾಯಕ್, ಪುತ್ರ ಉನ್ನತ್ ನಾಯಕ್,ಸೊಸೆ ಶ್ರೀಶಾ ನಾಯಕ್ ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿ ದೇವರ ಆಶ್ರೀರ್ವಾದ ಪಡೆದಿದ್ದಾರೆ.

ಶಾಸಕರ ಪುತ್ರನ ಮದುವೆಯ ಬಳಿಕ ಪ್ರಥಮ ಕಾರ್ಯಕ್ರಮ, ಕುಟುಂಬ ಸಮೇತರಾಗಿ ಆಯೋಧ್ಯೆ ಬೇಟಿ ಮಾಡಿ ದೇವರ ಆಶ್ರೀರ್ವಾದ ಪಡೆದಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...