Friday, January 30, 2026

ಆ.30: ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ

ಬಂಟ್ವಾಳ: ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚದ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ ಆ.30 ರಂದು ಆದಿತ್ಯವಾರ ಬೆಳಿಗ್ಗೆ 8:00 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ವೀರಕಂಭ ಗ್ರಾಮದ ವೀರಕಂಬ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯಲಿರುವುದು.

ನೊಂದಣಿ ಮಾಡುವವರು ಕುಟುಂಬದ ಎಲ್ಲಾ ವ್ಯಕ್ತಿಗಳ ಆಧಾರ್ ಕಾರ್ಡ್, ರೇಶನ್ ಕಾರ್ಡ್ ನೊಂದಿಗೆ ಮುಖಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

More from the blog

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...