Saturday, January 31, 2026

ಉಕ್ಕುಡ: ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ

ವಿಟ್ಲ: ವಿಟ್ಲ ಸಮೀಪದ ಉಕ್ಕುಡ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರದಲ್ಲಿ 410 ಫಲಾನುಭವಿಗಳು ಪ್ರಯೋಜನ ಪಡೆದರು.
ವಿಟ್ಲ ಲಯನ್ಸ್ ಕ್ಲಬ್, ವಿಟ್ಲ ಮತ್ತು ಪುತ್ತೂರು ಟೋಪ್ಕೋ ಜ್ಯುವೆಲ್ಲರಿ, ಬದ್ರಿಯಾ ಜುಮಾ ಮಸೀದಿ ಉಕ್ಕುಡ, ಉಕ್ಕುಡ ಪಬ್ಲಿಕ್ ಸ್ಕೂಲ್ ಸಹಯೋಗದೊಂದಿಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ರಶೀದ್ ವಿಟ್ಲ ವಹಿಸಿದ್ದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಹರ್ಷಿತ್, ಕೋಶಾಧಿಕಾರಿ ಭಾರತಿ ಪ್ರಕಾಶ್, ಸದಸ್ಯ ಪ್ರಕಾಶ್ ವಿಟ್ಲ, ಟೋಪ್ಕೋ ಜ್ಯುವೆಲ್ಲರಿ ಮಾಲಕರಾದ ಮಹಮ್ಮದ್ ಟಿ.ಕೆ., ಉಕ್ಕುಡ ಜುಮಾ ಮಸೀದಿ ಕಾರ್ಯದರ್ಶಿ ಶರೀಫ್ ತ್ವೈಬಾ, ಉಕ್ಕುಡ ಪಬ್ಲಿಕ್ ಸ್ಕೂಲ್ ಮಾಜಿ ಅಧ್ಯಕ್ಷ ಹಮೀದ್ ಟಿ.ಎಚ್.ಎಂ.ಎ., ಕಾರ್ಯದರ್ಶಿ ಹನೀಫ್ ಕುದ್ದುಪದವು, ಕೋಶಾಧಿಕಾರಿ ಅನ್ವರ್ ಉಕ್ಕುಡ, ಸಂಚಾಲಕ ಅಬೂಬಕರ್ ಟೆಲಿಫೋನ್, ಜೊತೆ ಕಾರ್ಯದರ್ಶಿ ಮುನೀರ್ ದರ್ಬೆ, ಸದಸ್ಯ ಸಿದ್ದೀಕ್ ಆಲಂಗಾರು, ಜುಮಾ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ನೆಕ್ಕರೆಕಾಡು, ಪದಾಧಿಕಾರಿಗಳಾದ ಡಿ.ಎಂ. ಅಬ್ದುರ್ರಹ್ಮಾನ್ ದರ್ಬೆ, ಅಬೂಬಕರ್ ಮೆಹರಾಜ್, ಮಹಮೂದ್ ಕಾನತ್ತಡ್ಕ, ಡಿ.ಕೆ. ಅಬ್ದುಲ್ ಖಾದರ್, ಅದ್ದು ಬುಡಾಲ್ತಡ್ಕ, ಶರೀಫ್ ಫಿಶ್, ಹಸನ್ ಟಿ.ಎಚ್.ಎಂ.ಎ. ಉಪಸ್ಥಿತರಿದ್ದರು.
ಮುಸ್ತಫಾ ದೇರಳಕಟ್ಟೆ, ಅಶ್ರಫ್ ಕುಕ್ಕಾಜೆ ಆಯುಷ್ಮಾನ್ ಭಾರತ್ ಕುರಿತು ಮಾಹಿತಿ ನೀಡಿದರು. ಡಿ.ಎಂ. ರಶೀದ್ ದರ್ಬೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಶಿಬಿರದಲ್ಲಿ ನೋಂದಾವಣೆ ಮಾಡಿರುವ ಆಯುಷ್ಮಾನ್ ಕಾರ್ಡ್ ಟೋಕನ್ ನಂಬ್ರ ಪ್ರಕಾರ ಆಗಸ್ಟ್ 31 ರಿಂದ ಸೆಪ್ಟಂಬರ್ 3 ರ ತನಕ ವಿಟ್ಲ ಟೋಪ್ಕೋ ಜ್ಯುವೆಲ್ಲರಿಯಲ್ಲಿ ಉಚಿತವಾಗಿ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...