Friday, January 30, 2026

ಕೊಳ್ನಾಡು: ಆಯುಷ್ಮಾನ್ ಕಾರ್ಡ್‌ ನೋಂದಾವಣೆ ಕಾರ್ಯಕ್ರಮ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ, ರೈತಮೋರ್ಚಾ ಬಂಟ್ವಾಳ ಕ್ಷೇತ್ರ, ಕೊಳ್ನಾಡು ಬಿ.ಜೆ.ಪಿ ಇದರ ನೇತೃತ್ವದಲ್ಲಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಕಾರ್ಡ್‌ ನೋಂದಾವಣೆಯು ಕೊಳ್ನಾಡು ಗ್ರಾಮದ ಸಾಲೆತ್ತೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಆಯುಷ್ಮಾನ್ ಕಾರ್ಡ್‌ ನೋಂದಾವಣೆಯ ಪ್ರಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ, ಕ್ಷೇತ್ರ ಬಿಜೆಪಿ ಸದಸ್ಯ ಬಾಲಕೃಷ್ಣ ಸೆರ್ಕಳ, ಕ್ಷೇತ್ರ ರೈತ ಮೋರ್ಚಾ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಅಗರಿ, ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಕ್ಷೇತ್ರ ಬಿಜೆಪಿ ಸದಸ್ಯ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಹಿತ್,  ಶಕ್ತಿಕೇಂದ್ರ ಪ್ರಮುಖ್ ವೇಣುಗೋಪಾಲ್ ಮಂಕುಡೆ, ಪಕ್ಷದ ಕಾರ್ಯಕರ್ತರಾದ ಗಂಗಾಧರ್ ಆಚಾರ್ಯ, ಸದಾನಂದ ಶೆಟ್ಟಿ ಅಗರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...