Thursday, June 26, 2025

ವೀರಕಂಬ ಶ್ರೀ ಶಾರದ ಭಜನಾ ಮಂದಿರದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ

ಕಲ್ಲಡ್ಕ:  ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರ ಹಾಗೂ ಬಿಜೆಪಿ ಯುವ ಮೋರ್ಚದ ವತಿಯಿಂದ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಕಾರ್ಯಕ್ರಮ ವೀರಕಂಬ ಶ್ರೀ ಶಾರದ ಭಜನಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಸಂದೇಶ ಕುಮಾರ್ ಶೆಟ್ಟಿ ಅರೆಬೆಟ್ಟು ರವರು ದೀಪ ಬೆಳಗಿಸಿ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತನಾದರೆ ದೇಶವೇ ಆರೋಗ್ಯವಂತ ದೇಶವಾಗುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡುವುದು ಅಗತ್ಯವಾಗಿದ್ದು, ಕೇಂದ್ರ ಸರಕಾರದ ಆಯುಷ್ಮಾನ್ ಕಾರ್ಡು ಪ್ರತಿಯೊಬ್ಬರಿಗೂ ಆಪತ್ಕಾಲದಲ್ಲಿ ಸಹಕಾರಿಯಾಗುತ್ತದೆ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಣಿ ಶಕ್ತಿಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿಸೋಜ ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ಶಾರದಾ ಭಜನಾ ಮಂದಿರದ ಸಂಚಾಲಕ ನಾರಾಯಣ ಭಟ್ ಬೆತ್ತ ಸರವು, ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾ.ಪಂ. ಸದಸ್ಯೆ ಗೀತ ಚಂದ್ರಶೇಖರ್ ನೆರಳಕಟ್ಟೆ, ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಆಗಮಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಬ ಗ್ರಾ.ಪಂ. ನಿಕಟಪೂರ್ವ ಸದಸ್ಯ ಜಯಂತಿ ಜನಾರ್ಧನ್, ಉದ್ಯಮಿ ಶ್ರೀದೇವಿ ಕನ್ಟ್ರಕ್ಷನ್ ಮಾಲಕ  ಸಂದೀಪ್ ಕುಮಾರ್ ಶೆಟ್ಟಿ ಅರೆಬೆಟ್ಟು, ಬಿಜೆಪಿ ಹಿಂದುಳಿದ ವರ್ಗದ ಸದಸ್ಯ ವೀರಪ್ಪ ಮೂಲ್ಯ, ವೀರಕಂಬ ಗ್ರಾಮ ಭೂತ ಸಮಿತಿಯ ಅಧ್ಯಕ್ಷರುಗಳಾದ ದಿನೇಶ್ ಪೂಜಾರಿ ಹಾಗೂ ಸದಾಶಿವ, ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಬೆತ್ತ ಸರವು ಹಾಗೂ ರಮೇಶ್ ಗೌಡ ಮೈರ, ಬಿಜೆಪಿ ಎಸ್.ಟಿ. ಮೋರ್ಚಾದ ಸದಸ್ಯರಾದ  ಕೇಶವ ನಾಯ್ಕ ಕೆಮ್ಮಟೆ, ಬಂಟ್ವಾಳ ಭೂ ಅಭಿವೃದ್ಧಿ  ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಬಾಯಿಲ, ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ ಉಪಸ್ಥಿತರಿದ್ದರು. ಸುಮಾರು 673 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...