Friday, January 30, 2026

ಬಂಟ್ವಾಳ ಹಿಂದು ಜಾಗರಣ ವೇದಿಕೆಯಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕಿನ ಆಶ್ರಯದಲ್ಲಿ ನೂತನ ಆ್ಯಂಬುಲೆನ್ಸ್ ಇಂದು ಲೋಕಾರ್ಪಣೆ ಗೊಂಡಿತ್ತು.

ವಿಷೇಶವಾಗಿ ಈ ಅಂಬುಲೆನ್ಸ್ ಸಂಘದ ಹಿರಿಯ ಸನ್ಯಾಸಿ ವೆಂಕಟ್ರಮಣ ಹೊಳ್ಳ ಮತ್ತು ಸೇನಾನಿ ಶರತ್ ಮಡಿವಾಳ ಇವರ ಸ್ಮರಣಾರ್ಥ ವಾಗಿ ಲೋಕಾರ್ಪಣೆ ಗೊಳಿಸಲಾಗಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿಭಾಗ ಸಹ ಕಾರ್ಯವಾಹಕ್ ಜಗದೀಶ್ ಕಲ್ಲಡ್ಕ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರು ದ್ವೀಪ ಪ್ರಜ್ವಲಿಸುವ ಮುಕಾಂತರ ಈ ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಿಲ್ಲಾ ಕಾರ್ಯವಾಹ ವಿನೋದ್ ಕೊಡಮನ್, ಶಾರಧ ಗಣಪತಿ ವಿದ್ಯಾ ಕೇಂದ್ರ ಕೈರಂಗಳ ದ ಸಂಚಾಲಕರು ರಾಜ ರಾಮ್ ಭಟ್, ಹಿಂ.ಜಾ.ವೇ. ಪ್ರಾಂತ ಕಾರ್ಯ ಕಾರಿಣಿ ಸದಸ್ಯರು ರವಿರಾಜ್ ಬಿಸಿರೋಡ್, ಹಿಂ.ಜಾ.ವೇ ವಿಭಾಗ ಸಂಪರ್ಕ ಪ್ರಮುಕ್ ರತ್ನಕರ ಶೆಟ್ಟಿ ಕಲ್ಲಡ್ಕ, ಹಿಂ.ಜಾ.ವೇ ಜಿಲ್ಲಾ ಅಧ್ಯಕ್ಷರು ಜಗದೀಶ್ ನೇತ್ರ ಕೆರೆ, ಭಾರತಿಯ ಜನತಾ ಪಾರ್ಟಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಭಾರತಿಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಹಿಂ.ಜಾ.ವೇ. ಜಿಲ್ಲಾ ಹಿಂದೂ ಯುವ ವಾಹಿನಿ ಸಂಯೋಜಕ್ ಪ್ರಶಾಂತ್ ಕೆಂಪುಗುಡ್ಡೆ, ಹಿಂ.ಜಾ.ವೇ. ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರ ಕಲಯಿ, ಬಾಲಕೃಷ್ಣ ಕಲಯಿ, ಹಿಂ.ಜಾ.ವೇ. ಬಂಟ್ವಾಳ ಅಧ್ಯಕ್ಷರಾದ ತಿರುಲೇಶ್ ಬೆಳ್ಳೋರು, ಹಿಂ.ಜಾ.ವೇ. ಬಂಟ್ವಾಳ ಪ್ರಧಾನ ಕಾರ್ಯದರ್ಶಿ ಯೋಗೀಶ್ ತುಂಬೆ, ಮಾತ್ರ್ ಸುರಕ್ಷಾ ಪ್ರಮುಕ್ ಶಿವಪ್ರಸಾದ್ ಧನುಪೂಜೆ, ವಿಶ್ವ ಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಪ್ರದಾನ ಕಾರ್ಯದರ್ಶಿ ಸುರೇಶ ಬೆಂಜಾನಪದವು, ತುಂಬೆ ತಾಲೂಕು ಪಂಚಾಯತ್ ಸದಸ್ಯರ ಗಣೇಶ್, ಕಳ್ಳಿಗೆ ಪಂಚಾಯತ್ ಉಪಾಧ್ಯಕ್ಷ ದಾಮೋದರ ನೇತ್ರ ಕೆರೆಹರೀಶ್ ಬಾಂಬಿಲ, ರವಿ ಕೆಂಪುಗುಡ್ಡೆ, ಜಗದೀಶ್ ಕಾಮಜೆ, ಸಚಿನ್ ಬಿಸಿರೋಡ್, ಪರಿವಾರ ಸಂಘಟನೆಯ ಪ್ರಮುಖರು ಮತ್ತು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು ಸಮಾಜದ ಸೇವೆಗೆ ಇಂದಿನಿಂದ ಬಂಟ್ವಾಳದಲ್ಲಿ ಒದಗಲಿದೆ.

ಕಾರ್ಯಕ್ರಮವನ್ನು ಹಿಂ.ಜಾ.ವೇ. ಜಿಲ್ಲಾ ಸಂಪರ್ಕ ಪ್ರಮುಕ್ ನರಸಿಂಹ ಮಾಣಿ ಯವರು ಸ್ವಾಗತಿಸಿ, ಪ್ರಸ್ತಾವಿಸಿ ಕಾರ್ಯಕ್ರಮ ನಿರೂಪಿಸಿದರು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...