ಬಂಟ್ವಾಳ: ಸಮಾನತೆಯ ತತ್ವ ಸಾರಿದ ಬಸವಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗುತ್ತದೆ ಆಡು ಭಾಷೆಯಲ್ಲೆ ವಚನಗಳನ್ನು ರಚಿಸಿ ಎಲ್ಲಾ ಜನರ ಮನ ಮುಟ್ಟುವಂತೆ ತಿಳಿ ಹೇಳಿದವರು ಬಸವಣ್ಣನವರು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಹೇಳಿದರು.


ಅವರು ಶುಕ್ರವಾರ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಳ ರೀತಿಯಲ್ಲಿ
ನಡೆದ ಬಸವಣ್ಣ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.












