ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರದಿಂದ ಕೋವಿಡ್ ನಿಗ್ರಹಿಸಲು ನೂತನ ಮಾರ್ಗಸೂಚಿ ಪ್ರಕಟಗೊಂಡಿದ್ದು ಈ ದಿಢೀರ್ ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಇಂದಿನಿAದ ಮೇ 4ರ ವರೆಗೆ ಅಗತ್ಯ ಸೇವೆ ಹೊರತುಪಡಿಸಿ ಬಾಕಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಹಿತ ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವನ್ನು ಬಂದ್ ಮಾಡಿಸಲಾಗುತ್ತಿದೆ. ಬಟ್ಟೆಯಂಗಡಿ, ಇಲೆಕ್ಟ್ರಾನಿಕ್ ಶಾಪ್ ಸೇರಿದಂತೆ ಉಳಿದೆಲ್ಲಾ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗುತ್ತಿದೆ. ಶಾಲೆ ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ. ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಸ್ಪಾ, ಈಜುಕೊಳ, ಕ್ರೀಡಾ ಸಂಕೀರ್ಣ, ಅಮ್ಯೂಸ್ ಮೆಂಟ್ ಪಾರ್ಕ್ಗಳು ಬಂದ್ ಆಗಿರಲಿದೆ.
ಹೊಸ ಮಾರ್ಗಸೂಚಿ ಕ್ರಮದಂತೆ ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ. ಎಲ್ಲಾ ಇ ಕಾಮರ್ಸ್ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್ ಬಂದ್ ಮಾಡಲಾಗುತ್ತಿದೆ. ಶಾಲಾ- ಕಾಲೇಜು ಮುಚ್ಚಲಾಗುತ್ತಿದೆ. ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ರಾತ್ರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬಸ್‌ನಲ್ಲಿ ತೆರಳೋರು ಟಿಕೆಟ್ ತೋರಿಸಿ ಸಾಗಬೇಕು. ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್ ಮಾಡಲಾಗುತ್ತಿದೆ. ಭಕ್ತರಿಗೆ ಅವಕಾಶವಿಲ್ಲ. ಸಲೂನ್, ಬ್ಯೂಟಿ ಪಾರ್ಲರ್‌ಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ಇದಲ್ಲದೆ ಅಗತ್ಯ ಸೇವೆ ಒದಗಿಸುವಂತ ಸೇವೆಯ ಶಾಪ್‌ಗಳು ಹೊರತಾಗಿ, ರಾಜ್ಯಾಧ್ಯಂತ ಇತರೆ ಶಾಪ್‌ಗಳನ್ನು ಬಂದ್ ಮಾಡುವಂತೆ ಇದೀಗ ನೂತನ ಮಾರ್ಗಸೂಚಿ ಆದೇಶದಲ್ಲಿ ತಿಳಿಸಲಾಗಿದೆ.
ಈ ಮೂಲಕ ನಿನ್ನೆಯಿಂದಲೇ ಅನ್ವಯವಾಗುವಂತೆ ಪರಿಷ್ಕೃತ ಮಾರ್ಗಸೂಚಿ ಆದೇಶದಲ್ಲಿ ಅಗತ್ಯಸೇವೆ ಹೊರತಾಗಿ ಉಳಿದ ಎಲ್ಲಾ ಶಾಪ್ ಬಂದ್‌ಗೆ ಸೂಚಿಸಲಾಗಿದೆ. ಹೀಗಾಗಿ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಅಗತ್ಯ ಸೇವೆ ಒದಗಿಸುವ ಮೆಡಿಕಲ್, ಹಾಲು, ಇ-ಕಾಮರ್ಸ್ ಸೇರಿದಂತೆ ಇತರೆ ಶಾಪ್ ಹೊರತಾಗಿ ಇತರೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುತ್ತಿದ್ದಾರೆ.
