Saturday, January 31, 2026

ಆರೋಗ್ಯಕ್ಕೆ ದೈಹಿಕ ವ್ಯಾಯಾಮ ಅಗತ್ಯ-ವೈದ್ಯಧಿಕಾರಿ ಡಾ.ಆರತಿ

ಬಂಟ್ವಾಳ: ದೈಹಿಕ ವ್ಯಾಯಾಮ ಕಡಿಮೆಯಾದಂತೆ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಿಂದಿನ ಕಾಲದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಬೇಕಾದರೆ ಕಾಲ್ನಡಿಗೆಯಲ್ಲೇ ತೆರಳುತ್ತಿದ್ದೇವು. ಆದರೆ ಬದಲಾದ ಜೀವನ ಶೈಲಿ, ಆಹಾರ ಪದ್ಧತಿಯಿಂದ ಆರೋಗ್ಯದಲ್ಲಿ ತೊಂದರೆಯಾಗುತ್ತಿದೆ ಎಂದು ಸಂಪನ್ಮೂಲ ವ್ಯಕ್ತಿ ಹಿರಿಯ ದಂತ ವೈದ್ಯಧಿಕಾರಿ ಡಾ.ಆರತಿ ಕಳವಳ ವ್ಯಕ್ತಪಡಿಸಿದರು.

ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್‌ ವ್ಯಾಪ್ತಿಯ ದ.ಕ.ಜಿ.ಪಂ. ಸರ್ಕಾರಿ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಗ್ರಾಮ ಆರೋಗ್ಯ ಆಭಿಯಾನ, ತಂಬಾಕು ನಿಯಂತ್ರಣ, ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಂಬಾಕು ತಿನ್ನುವುದಿಲ್ಲ ಮದ್ಯಪಾನವಷ್ಟೇ ಮಾಡುತ್ತೇವೆ, ಮದ್ಯಪಾನವಷ್ಟೇ ಮಾಡುತ್ತೇವೆ, ತಂಬಾಕು ತಿನ್ನುವುದಿಲ್ಲ ಎಂದು ಕೆಲವರು ವಾದ ಮಾಡುತ್ತಾರೆ. ಆದರೆ ಯಾವುದೇ ಕೆಟ್ಟ ಅಭ್ಯಾಸವಿದ್ದರೂ, ನಮ್ಮ ಆರೋಗ್ಯಕ್ಕೆ ಹಾನಿಕರ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾ.ಪಂ. ಸಹಾಯಕ ನಿರ್ದೇಶಕ ದಿನೇಶ್‌ ಎಂ. ಮಾತನಾಡಿ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಪ್ರತಿಯೊಬ್ಬರಿಗೂ ಅಮೂಲ್ಯವಾದದ್ದು, 30 ವರ್ಷ ದಾಟಿದ ಬಳಿಕ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಗ್ರಾಮ ಆರೋಗ್ಯ ಎಂಬುದು ಕೇವಲ ನರೇಗಾ ಕೂಲಿಕಾರರಿಗೆ ಮಾತ್ರ ಇರುವ ಅಭಿಯಾನವಲ್ಲ. ಗ್ರಾಮದ ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ವೇಳೆ ಕಣ್ಣಿನ ತಪಾಸಣೆಯನ್ನೂ ಹಮ್ಮಿಕೊಂಡು ಕನ್ನಡಕ ವಿತರಣೆಯನ್ನೂ ಮಾಡಲಾಯಿತು. ಪಿಡಿಒ ಶಿವು ಬಿರಾದರ್‌ ಸ್ವಾಗತಿಸಿ, ವಂದಿಸಿದರು. ಗ್ರಾ.ಪಂ.ಅಧ್ಯಕ್ಷೆ ವಿನಿತಾ ಪುರುಷೋತ್ತಮ, ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮಾ, ತಾಲೂಕು ನರೇಗಾ ಐಇಸಿ ಸಂಯೋಜಕ ರಾಜೇಶ್‌, ಜಿಪಿಎಎಎ ತಾಲೂಕು ಸಂಯೋಜಕರಾದ ಅಲ್ಲಾಭಕ್ಷ್‌, ಮಿಥುನ್‌, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು, ವೈದ್ಯರು, ಶ್ರುಷೂಕಿಯರು, ಗ್ರಾಮದ ಜನರು ಭಾಗವಹಿಸಿದ್ದರು.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...