Tuesday, February 3, 2026

ವೀಕೆಂಡ್ ಕರ್ಫ್ಯೂ: ಬಿಕೋ ಎನ್ನುತ್ತಿದೆ ಬಂಟ್ವಾಳ ತಾಲೂಕು

ಬಂಟ್ವಾಳ: ಹೆಚ್ಚುತ್ತಿರುವ ಕೊರೋನ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿಯಂತೆ ವಾರಾಂತ್ಯ ಕರ್ಫ್ಯೂ ದಿನವಾದ ಶನಿವಾರ ಬೆಳಗ್ಗೆ 11 ಗಂಟೆಯಾಗುತ್ತಿದ್ದಂತೆ ಬಂಟ್ವಾಳ ತಾಲೂಕು ಸಂಪೂರ್ಣ ಸ್ತಬ್ದಗೊಂಡಿದೆ.

ಸದಾ ಜನಜಂಗುಳಿಯಿಂದ ತುಳುಕುತ್ತಿರುವ ಇಡೀ ತಾಲೂಕಿನ ಕೇಂದ್ರ ಸ್ಥಾನ, ಪ್ರಮುಖ ವ್ಯಾಪಾರ, ವ್ಯಾವಹಾರಿಕ ಕೇಂದ್ರ, ಮಿನಿವಿಧಾನ ಸೌಧ, ನ್ಯಾಯಾಲಯ, ಪೊಲೀಸ್ ಠಾಣೆ, ಶಾಸಕರ ಕಚೇರಿ ಸಹಿತ ಸರಕಾರಿ ಹಾಗೂ ವಿವಿಧ ಖಾಸಗಿ ಕಚೇರಿಗಳನ್ನು ಹೊಂದಿರುವ ಬಿ.ಸಿ.ರೋಡ್ 11 ಗಂಟೆಯ ಬಳಿಕ ಬಿಕೋ ಎನ್ನುತ್ತಿದೆ.

ವಾರಾಂತ್ಯ ಕರ್ಫ್ಯೂಗೆ ಬಂಟ್ವಾಳ ತಾಲೂಕಿನಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರೆತಿದೆ. ತಾಲೂಕಿನ ಮಾಣಿ, ಕಲ್ಲಡ್ಕ, ವಿಟ್ಲ, ಮೆಲ್ಕಾರ್, ಪಾಣೆಮಂಗಳೂರು, ತುಂಬೆ, ಫರಂಗಿಪೇಟೆ, ಸಿದ್ದಕಟ್ಟೆ ಮೊದಲಾದ ಪ್ರದೇಶಗಳಲ್ಲಿ ಬೆಳಗ್ಗೆ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು 11 ಗಂಟೆ ಆಗುತ್ತಿದ್ದಂತೆ ಬಂದ್ ಮಾಡಿ ವ್ಯಾಪಾರಿಗಳು ಮನೆ ಸೇರಿದ್ದಾರೆ.

ತಾಲೂಕಿನ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಹಾಗೂ ಒಳ ರಸ್ತೆಗಳಲ್ಲಿ ಬೆಳಗ್ಗೆಯಿಂದ ತೀರ ವಿರಳವಾಗಿದ್ದ ವಾಹನ ಸಂಚಾರವೂ 11 ಗಂಟೆಯಾಗುತ್ತಿದ್ದಂತೆ ಸಂಪೂರ್ಣ ಸ್ಥಗಿತಗೊಂಡಿದೆ. ತಾಲೂಕಿನ ವಿವಿಧೆಡೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...