Tuesday, January 27, 2026

ಬೆಂಗಳೂರು ನಗರ ದೇಶದಲ್ಲೇ ಕೊರೋನ ಸಕ್ರಿಯ ಪ್ರಕರಣ ಹೊಂದಿರುವ ನಂ.1 ಜಿಲ್ಲೆ!

ಬೆಂಗಳೂರು: ಇಡೀ ದೇಶದಲ್ಲೇ ಬೆಂಗಳೂರು ನಗರ ಜಿಲ್ಲೆ ಅತೀ ಹೆಚ್ಚು ಕೊರೋನಾ ಸಕ್ರೀಯ ಸೋಂಕಿತರನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಆಘಾತಕಾರಿ ವರದಿಯನ್ನು ನೀಡಿದೆ.

ರಾಜ್ಯದಲ್ಲಿ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ನಿನ್ನೆ ಕೊರೋನಾ ಸೋಂಕಿನ ಸಂಖ್ಯೆ ದಾಖಲಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 26,962 ಜನರಿಗೆ ಕೊರೋನಾ ಪಾಸಿಟಿವ್ ಆಗಿದೆ. ಬೆಂಗಳೂರು ನಗರದಲ್ಲಿ 16,662 ಮಂದಿಗೆ ಪಾಸಿಟಿವ್ ಆಗಿದ್ದು 124 ಮಂದಿ ಮೃತಪಟ್ಟಿದ್ದಾರೆ. 1,49,624 ಸಕ್ರಿಯ ಪ್ರಕರಣಗಳು ದಾಖಲಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಸೋಂಕಿತರಿಗೆ ಆಕ್ಸಿಜನ್, ಐಸಿಯು, ಬೆಡ್ ಕೊರತೆಯುಂಟಾಗಿದ್ದು ರೋಗಿಗಳು ಪರದಾಡಿ ಸಾವನ್ನಪ್ಪುತ್ತಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಕೂಡ ರಾಜಧಾನಿಯಲ್ಲಿ ಕೋವಿಡ್ ಆಕ್ಟಿವ್ ಕೇಸ್‌ಗಳು ಹೆಚ್ಚುತ್ತಿವೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...