Saturday, January 31, 2026

ಎಪ್ರಿಲ್ 30ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಕ್ತದಾನ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಶ್ರೀರಾಮ ಪದವಿ ಕಾಲೇಜು – ರೆಡ್ ಕ್ರಾಸ್ ಘಟಕವು ಕೆ.ಎಸ್.ಹೆಗಡೆ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ಎಪ್ರಿಲ್ 30ರಂದು ಬೆಳಗ್ಗೆ 9.30ರಿಂದ ಮಧ್ಯಾನ 1ರ ವರೆಗೆ ರಕ್ತದಾನ ಶಿಬಿರವನ್ನು ಆಯೋಜಿಸಿದೆ.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸಿಕೊಳ್ಳಬೇಕಾಗಿರುವುದರಿಂದ ನಂತರದ 2-3 ತಿಂಗಳು ರಕ್ತದಾನಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿ ಎಂಬ ಯೋಜನೆಯನ್ನು ರೂಪಿಸಲಾಗಿದೆ. ಆಸಕ್ತರು ಅಂದು ನೇರವಾಗಿ ವಿದ್ಯಾಕೇಂದ್ರದ ಪದವಿ ಕಾಲೇಜಿನ ಆವರಣದಲ್ಲಿ ಬಂದು ನೇರವಾಗಿ ನೋಂದಣಿ ಮಾಡಿ ರಕ್ತದಾನ ಮಾಡಿ ಪ್ರಮಾಣ ಪತ್ರ ಪಡೆಯಬಹುದು.

ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ಹಾಗೂ ರಕ್ತದಾನ ಬಳಿಕ ತೆರಳುವವರಿಗೆ ಅನುಮತಿ ಪತ್ರ ನೀಡಲಾಗುವುದು. ರಕ್ತದಾನ ಮಾಡುವವರು 10 ಗಂಟೆ ಮೊದಲೇ ಕೇಂದ್ರವನ್ನು ತಲುಪಬೇಕು. ವಿದ್ಯಾಕೇಂದ್ರವು ಹಲವಾರು ಸಮಾಜಮುಖೀ ಕೆಲಸಗಳನ್ನು ಅನೇಕ ವರ್ಷಗಳಿಂದ ಮಾಡುತ್ತಾ ಬರುತ್ತಿದ್ದು, ಇದೀಗ ಲಾಕ್ದೌನ್ ಸಂದರ್ಭದಲ್ಲಿ ಸರಕಾರದ, ಇಲಾಖೆಯ ಅನುಮತಿಯೊಂದಿಗೆ ಈ ಚಟುವಟಿಕೆ ಹಮ್ಮಿಕೊಂಡಿದೆ ಎಂದು ವಿದ್ಯಾಸಂಸ್ಥೆಯ ಸಂಚಾಲಕರ ಪ್ರಕಟಣೆ ತಿಳಿಸಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...