Saturday, January 31, 2026

ಬಹ್ರೇನ್ ನಿಂದ ಹಡಗಿನಲ್ಲಿ ಮಂಗಳೂರು ತಲುಪಿದ 40 ಟನ್ ಆಕ್ಸಿಜನ್

ಬಂಟ್ವಾಳ: ಕೊರೋನ ಸೋಂಕಿತರ ಚಿಕಿತ್ಸೆಯಲ್ಲಿ ಅತೀ ಪ್ರಮುಖವಾಗಿರುವ ಆಕ್ಸಿಜನ್ ಕೊರತೆಯನ್ನು ನೀಗಿಸಲು ಬಹ್ರೇನ್ ನಿಂದ ಹೊರಟಿರುವ 40 ಟನ್ ಆಕ್ಸಿಜನ್ ಮಂಗಳೂರು ಬಂದರ್ ಅನ್ನು ತಲುಪಿದೆ.

ಬಹ್ರೇನ್ ದೇಶದಿಂದ ಇಂಡಿಯನ್ ನೇವಿ ಹಡಗಿನ ಮೂಲಕ ಹೊರಟಿರುವ 40 ಟನ್ ಆಕ್ಸಿಜನ್ ಸಿಲಿಂಡರ್ ಗಳು ಮಂಗಳೂರು ಹಡಗು ನಿಲ್ದಾಣಕ್ಕೆ ತಲುಪಿದೆ. ರೆಡ್ ಕ್ರಾಸ್ ಮೂಲಕ ಆಕ್ಸಿಜನ್ ಅನ್ನು ಮಂಗಳೂರು ಅಧಿಕಾರಿಗಳಿಗೆ ಹಸ್ತಾಂತರಿಸುವ ಕೆಲಸ ಆಗುತ್ತಿದೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಡಾ. ರಾಜೇಶ್ ಕೆ.ವಿ., ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ರೆಡ್ ಕ್ರಾಸ್ ಅಧಿಕಾರಿಗಳು, ಎನ್.ಎಂ‌.ಪಿ.ಟಿ. ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ಗಣೇಶ್ ಶಿಪ್ಪಿಂಗ್ ಮಾಲಕ, ಮಾಜಿ ಸಚಿವ ನಾಗರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...