ಉಜಿರೆ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಶುಕ್ರವಾರ ಸಂಜೆ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.
ಶಾಸಕ ಹರೀಶ್ ಪೂಂಜ ಮತ್ತು ಹೆಗ್ಗಡೆಯವರ ಸಹೋದರ ಡಿ. ಸುರೇಂದ್ರಕುಮಾರ್ ಉಪಸ್ಥಿತರಿದ್ದರು.
ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಮಂಗಳೂರಿಗೆ ಪ್ರಯಾಣ ಮುಂದುವರಿಸಿದರು.





