Wednesday, February 12, 2025

ಶಿಕ್ಷಣವನ್ನು ಕೊಡುವ ಶಿಕ್ಷಕರು ಸಮಾಜದ ಗೌರವಾನ್ವಿತ ವ್ಯಕ್ತಿಗಳು: ಡಾ. ಅಹ್ಮದ್ ಹಾಜಿ

ಬಂಟ್ವಾಳ: ಶಿಕ್ಷಣವನ್ನು ಕೊಡುವ ಶಿಕ್ಷಕರು ಸಮಾಜದ ಗೌರವಾನ್ವಿತ ವ್ಯಕ್ತಿಗಳು. ಅವರಿಂದ ಉತ್ತಮ ನಾಗರಿಕರು ಹಾಗೂ ಸುಸಂಸ್ಕೃತ ಸಮಾಜ ಸೃಷ್ಟಿಯಾಗುತ್ತದೆ ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ. ಅಹ್ಮದ್ ಹಾಜಿ ಮುಹಿಯುದ್ದೀನ್ ಹೇಳಿದರು.
ಅವರು ತುಂಬೆ ಪದವಿ ಪೂರ್ವ ಕಾಲೇಜಿ ನಲ್ಲಿ ತನ್ನ ಹುಟ್ಟು ಹಬ್ಬದ ಆಚರಣೆಯ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.
ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಶಿಕ್ಷಕ ವೃಂದದವರು ಸದಾ ಜ್ಞಾನ ದಾಹಿಗಳಾಗಿ ವಿದ್ಯಾರ್ಥಿಗಳಿಗೆ ಜ್ಞಾನ ಧಾರೆ ಎರೆಯಬೇಕಾಗಿದೆ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ತುಂಬೆ ವಿದ್ಯಾ ಸಂಸ್ಥೆಗೆ ಮ್ಯಾನೆಜ್ ಮೆಂಟ್ ವತಿಯಿಂದ ನೂತನ ಶಾಲಾ ಬಸ್ ಅನ್ನು ಹಸ್ತಾಂತರಿಸಲಾಯಿತು.
ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡಾ ತುಂಬೆ ಬ್ರಾಂಚ್ ನ ಮ್ಯಾನೇಜರ್ ಸಂದೀಪ್, ಎಂಇಟಿ ಟ್ರಸ್ಟಿ ಭೀಫಾತಿಮಾ ಅಹ್ಮದ್  ಹಾಜಿ, ತುಂಬೆ ಐಟಿಐ ಪ್ರಾಂಶುಪಾಲ ನವೀನ್ ಕುಮಾರ್ ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಮೋಲಿ ಎಡ್ನಾ, ಪ್ರತಿಮಾ, ಜಾನೆಟ್ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಶ್ರೀನಿವಾಸ್ ಕೆ. ವಂದಿಸಿ, ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ನಿರೂಪಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...