Saturday, January 31, 2026

ಖಾಸಗಿ ಬಸ್ ಗಳ ಬ್ಯಾಟರಿ ಕಳವು: ಬಸ್ ಮಾಲಕರಲ್ಲಿ ಆತಂಕ

ಬಂಟ್ವಾಳ: ಪೆಟ್ರೋಲ್ ಪಂಪ್ ನಲ್ಲಿ ರಾತ್ರಿ ನಿಲ್ಲಿಸಲಾಗಿದ್ದ ಖಾಸಗಿ ಬಸ್ ವೊಂದರ ಬ್ಯಾಟರಿ ಕಳವು ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಳವು ನಡೆಯುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗುತ್ತಿದೆ.

ಮಂಗಳವಾರ ರಾತ್ರಿ ಸುಮಾರು 1.30ರ ವೇಳೆಗೆ ಬಿಸಿರೋಡ್ ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಿಸಿರೋಡ್ ಕೊಣಾಜೆಯಿಂದ ಮಂಗಳೂರು ಪ್ರಯಾಣಿಸುವ ಖಾಸಗಿ ಬಸ್ ನಿಂದ ಬ್ಯಾಟರಿ ಕಳವು ಮಾಡಿದ್ದಾರೆ. ಅಲ್ಲದೆ ಕೆಲ ದಿನಗಳಿಂದ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ಬಸ್ ಗಳ ಬ್ಯಾಟರಿ ಕಳವು ನಡೆದಿದೆ ಎನ್ನಲಾಗಿದೆ. ಒಟ್ಟು ನಾಲ್ಕು ಬಸ್ ಗಳ ಬ್ಯಾಟರಿ ಕಳವಾಗಿದೆ ಎನ್ನಲಾಗಿದ್ದು, ಯಾರು ಕೂಡಾ ಈವರೆಗೆ ಲಿಖಿತವಾಗಿ ಪೋಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ.

ಕಳೆದ 20 ದಿನಗಳ ಹಿಂದೆ ಸಜೀಪದ ಕಂದೂರು ಎಂಬಲ್ಲಿ ಶಾಮಿಯಾನದವರ ಬ್ಯಾಟರಿ ಕೂಡಾ ಕಳವಾಗಿತ್ತು.
ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲ ತಿಂಗಳಿನಿಂದ ನಿರಂತರವಾಗಿ ಬ್ಯಾಟರಿ ಕಳವು ನಡೆಯುತ್ತಿದ್ದು ಬಸ್ ಮಾಲಕರಲ್ಲಿ ಆತಂಕ ವ್ಯಕ್ತವಾಗಿದೆ.ಬಸ್ ಮಾಲಕರು ದೂರು ನೀಡದಿದ್ದರೂ ಕೂಡಾ ಬಂಟ್ವಾಳ ಅಪರಾಧ ವಿಭಾಗದ ಪೋಲೀಸರು ಕಳ್ಳರ ಚಲನವಲನಗಳನ್ನು ಗಮನಿಸಲು ಆರಂಭಿಸಿದ್ದಾರೆ.‌

 

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...