Tuesday, July 1, 2025

ಬಾಕಿಲಗುತ್ತು ಬ್ರಹ್ಮಕಲಶೋತ್ಸವ: ಕೊಪ್ಪರಿಗೆ ಮುಹೂರ್ತ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಗಣಪತಿ ಹವನದ ಬಳಿಕ ಕೊಪ್ಪರಿಗೆ ಮುಹೂರ್ತ ನಡೆಯಿತು.
ಜುಮಾದಿ ಸಾನ್ನಿಧ್ಯದಲ್ಲಿ ಕಲಾಶಾಭಿಷೇಕ, ಗರಡಿಯಲ್ಲಿ ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ ನಡೆಯಿತು.
ಜ.28 ರಂದು ಕ್ಷೇತ್ರದಲ್ಲಿ ಅಷ್ಟೋತ್ತರ ಶತ(108) ನಾರಿಕೇಳ ಗಣಪತಿ ಹವನ, ಶತ ಚಂಡಿಕಾ ಯಾಗದ ಪಾರಾಯಣ ಆರಂಭವಾಗಲಿದೆ. ಬೈದೇರಿಗಳ ಗರಡಿಯಲ್ಲಿ ವಿಷ್ಣು ಸಹಸ್ರನಾಮ ಪಾರಾಯಣ, ದುರ್ಗಾಹೋಮ ಇನ್ನಿತರವೈದಿಕ, ಧಾರ್ಮಿಕ ಪೂಜಾ ಕಾರ್ಯಗಳು ನಡೆಯಲಿವೆ. ರಾತ್ರಿ ಧಾರ್ಮಿಕ ಸಭೆ ನಡೆಯಲಿದ್ದು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ನಾನಾ ಕ್ಷೇತ್ರಗಳ ಗಣ್ಯ ಮಹನೀಯರು ಭಾಗವಹಿಸಲಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...