Tuesday, January 27, 2026

ಬಾಕಿಲಗುತ್ತು: ಇಂದು ನಾಗ ದೇವರ, ಶ್ರೀ ದೈವಗಳ, ಬ್ರಹ್ಮ ಬೈದೇರುಗಳ ಪ್ರತಿಷ್ಠೆ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಗುರುವಾರ ಶ್ರೀ ಕ್ಷೇತ್ರದಲ್ಲಿ ಪ್ರಾತಃ ಕಾಲ ಗಣಪತಿ ಹವನದ ಬಳಿಕ ಮುಂಜಾನೆ 7.50 ಸುಮೂಹೂರ್ತದಿಂದ 11.30 ರ ತನಕ ಕುಂಭ ಲಗ್ನ ಹಾಗೂ ಮೀನ ಲಗ್ನದಲ್ಲಿ ಶ್ರೀ ನಾಗದೇವರ ಪುನರ್ ಪ್ರತಿಷ್ಠೆ, ರಕ್ತೇಶ್ವರಿ, ಉಳ್ಳಾಲ್ತಿ, ಹೊಸಮ್ಮ, ವೈದ್ಯನಾಥೇಶ್ವರ ಸಾನ್ನಿಧ್ಯಗಳ ಪ್ರತಿಷ್ಠಾಪನೆ, ಕಲಶಾಭಿಷೇಕ ಹಾಗೂ ಎಲ್ಲಾ ಪರಿವಾರ ದೈವಗಳ ಪ್ರತಿಷ್ಠೆ, ನಾಗದೇವರ, ಸನ್ನಿಧಿಯಲ್ಲಿ ಕಲಶಾಭಿಷೇಕ, ಆಶ್ಲೇಷಾ ಪೂಜೆ, ಮಹಾಪೂಜೆ ನಡೆಯಲಿದೆ.
ಬ್ರಹ್ಮ ಬೈದೇರುಗಳ ಗರೋಡಿಯಲ್ಲಿ ಪ್ರಾತಃಕಾಲ 3.30 ರ ಬ್ರಾಹ್ಮೀ ಮುಹೂರ್ತದಲ್ಲಿ ಆರಂಭಗೊಂಡು ಕುಂಭ ಸ್ಥಾಪನೆ, ಕುಂಭ ಪೂಜೆ, ಆದ್ಯ ಗಣಯಾಗ, ಶಿಖರ ಪ್ರತಿಷ್ಠೆಯ ಬಳಿಕ ಮುಂಜಾನೆ 9.37 ರ ಮೀನ ಲಗ್ನದ ಸುಮುಹೂರ್ತದಲ್ಲಿ ಬೆರ್ಮೆರ್ ಬೈದೇರುಗಳ ಹಾಗೂ ದೇರಬೈದ್ಯ ಗುರುಪೀಠ ಪ್ರತಿಷ್ಠೆ, ಪ್ರತಿಷ್ಠಾ ಹೋಮ ನಡೆಯಲಿದೆ.
108 ಕಲಶಗಳ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಮಹಾ ಮಂತ್ರಾಕ್ಷತೆಯ ಬಳಿಕ ಮಧ್ಯಾಹ್ನ 12.30 ಕ್ಕೆ ಬೈದೇರುಗಳ ದರ್ಶನ ನಡೆಯಲಿದೆ.
ಸಂಜೆ ಶ್ರೀ ವೈದ್ಯನಾಥೇಶ್ವರ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಉಳ್ಳಾಲ್ತಿ, ಹೊಸಮ್ಮ ಸನ್ನಿಧಿಯಲ್ಲಿ ಕಲಶಪೂಜೆ, ಸಪ್ತಶತೀ ಪಾರಾಯಣ ಸಮಾಪ್ತಿಯಾಗಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಕನ್ಯಾನ ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಚಿತ್ತರಂಜನ್ ಕಂಕನಾಡಿ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರಗಳ ಗಣ್ಯ, ಮಹನೀಯರು ಭಾಗವಹಿಸಲಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...